ಶ್ರೀರಂಗಪಟ್ಟಣ: ತಾಲ್ಲೂಕಿನ ಮೇಳಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರಾಧಾ ಮಹೇಶ್ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ರತ್ನಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈ ಆಯ್ಕೆ ನಡೆಯಿತು. ಬಿಇಒ ಆರ್.ಪಿ. ಮಹೇಶ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ರಾಧಾ ಮಹೇಶ್ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾ.ಪಂ. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಉಪಾಧ್ಯಕ್ಷ ವೆಂಕಟೇಶ್, ಮಾಜಿ ಅಧ್ಯಕ್ಷ ಬೆಟ್ಟೇಗೌಡ, ಸದಸ್ಯರಾದ ಅನುಪಮಾ, ಸೌಮ್ಯಾ, ಧನರಾಜ್, ಈರೇಗೌಡ, ಸದಾಶಿವ, ಬಾಲರಾಜು, ಪ್ರೇಮಾ, ಮಮತಾ, ಮೋಹನಕುಮಾರ್, ಸುನಂದಮ್ಮ ಹಾಜರಿದ್ದರು. ತಾ.ಪಂ. ಮಾಜಿ ಅಧ್ಯಕ್ಷ ಟಿ. ಶ್ರೀಧರ್ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.