ADVERTISEMENT

ಸಿದ್ದರಾಜುಗೆ ರಾಜ್ಯೋತ್ಸವ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 6:40 IST
Last Updated 31 ಅಕ್ಟೋಬರ್ 2025, 6:40 IST
ಎಂ.ಸಿದ್ದರಾಜು 
ಎಂ.ಸಿದ್ದರಾಜು    

ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲೆಯ ಮಳವಳ್ಳಿ ಪಟ್ಟಣದ ಎಂ.ಸಿದ್ದರಾಜು ಅವರಿಗೆ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 70 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಾಗೆಯೇ ಮಾಧ್ಯಮ ಕ್ಷೇತ್ರದಲ್ಲಿ ಎಂ.ಸಿದ್ದರಾಜು ಅವರಿಗೆ ಪ್ರಶಸ್ತಿ ಒಲಿದಿದೆ.

ಎಂ. ಸಿದ್ದರಾಜು ಅವರು 1976-77ರಲ್ಲಿ ‘ನವ ಭಾರತ’ ಪತ್ರಿಕೆಯಲ್ಲಿ ನಂತರ ಪ್ರೆಸ್‌ ಟ್ರಸ್ಟ್‌ ಆಫ್‌ ಇಂಡಿಯಾಗೆ (ಪಿಟಿಐ) ಸೇರಿ ಸುಮಾರು 37 ವರ್ಷ ಕರ್ತವ್ಯ ನಿರ್ವಹಿಸಿದ್ದಾರೆ. ಪಿಟಿಐನ ಸೌತ್‌ ಇಂಡಿಯಾ ಹೆಡ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಜತೆಗೆ ನಾಲ್ಕು ಬಾರಿ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ನಂತರ 2016ರಲ್ಲಿ ಮಾಧ್ಯಮ ಅಕಾಡಮಿ ಅಧ್ಯಕ್ಷರಾಗಿದ್ದರು. ಈ ವೇಳೆ ಇಡೀ ಕರ್ನಾಟಕ ಸುತ್ತಾಡಿ ವಿನೂತನ ಕಾರ್ಯಕ್ರಮ ರೂಪಿಸಿದ್ದರು. ಎಂ.ಸಿದ್ದರಾಜು ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.