ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 16:32 IST
Last Updated 22 ಆಗಸ್ಟ್ 2024, 16:32 IST
   

ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡವನ್ನು ನಗರದ ಎಫ್‌.ಟಿ.ಎಸ್‌.ಸಿ–1 (ಪೋಕ್ಸೊ ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ವಿಧಿಸಿದ್ದಾರೆ.

ಮದ್ದೂರು ಪಟ್ಟಣದ ಸೋಮೇಗೌಡರ ಬೀದಿಯ ನಿವಾಸಿ ಸುನಿಲ್‌ಕುಮಾರ್‌ (28) ಬಿನ್‌ ಬಸಪ್ಪ ಎಂಬಾತ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು.

ಆರೋಪಿ ವಿರುದ್ಧ ಮದ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಸಂತೋಷ್‌ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪತ್ರ ಸಲ್ಲಿಸಿದ್ದರು.

ADVERTISEMENT

ನೊಂದ ಬಾಲಕಿಗೆ ₹10.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಜೆ.ಪೂರ್ಣಿಮಾ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.