
ಪ್ರಜಾವಾಣಿ ವಾರ್ತೆ
ಮಂಡ್ಯ: ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಮೈಸೂರು ಜಿಲ್ಲೆ ತಿ.ನರಸೀಪುರದ ತಲಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಈ ಕುರಿತು ಬಾಲಕಿ ನಗರದ ಗ್ರಾಮಾಂತರ ಠಾಣೆಗೆ ಬುಧವಾರ ದೂರು ನೀಡಿದ್ದು ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಲಾಗಿದೆ.
ಯುವಕ ಬಾಲಕಿಗೆ ಪ್ರೇಮ ನಿವೇದನೆ ಮಾಡಿ ಮಳವಳ್ಳಿ ಸಮೀಪದ ಜಾತ್ರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ತಲಕಾಡು ನೋಡಲು ಕರೆದೊಯ್ದು ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.