ADVERTISEMENT

ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 20:03 IST
Last Updated 14 ಸೆಪ್ಟೆಂಬರ್ 2021, 20:03 IST

ಕೊಪ್ಪ (ಮಂಡ್ಯ ಜಿಲ್ಲೆ): ಕೊಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 6 ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳವಾರ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.

4 ತಿಂಗಳ ಹಿಂದೆ ಆರೋಪಿಯು ಬಾಲಕಿಗೆ ತಿಂಡಿ, ಚಾಕೊಲೆಟ್‌,ಮೊಬೈಲ್ ಫೋನ್ ಕೊಡಿಸುವ ಆಸೆ ತೋರಿಸಿ ನಿಗೂಢ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆರೋಪಿ ಬೆದರಿಸಿದ್ದರಿಂದ ಬಾಲಕಿ ಮನೆಯವರಿಗೆ ವಿಷಯ ತಿಳಿಸಿರಲಿಲ್ಲ.

‘ಈಚೆಗೆ ಗಣೇಶ ಮೂರ್ತಿಯನ್ನು ವಿಸರ್ಜಿಸುವ ಸಂದರ್ಭದಲ್ಲಿ ಆರೋಪಿ ಮತ್ತೆ ಬಾಲಕಿಗೆ ತೊಂದರೆ ನೀಡಿದ್ದ. ಆಕೆ ಮನೆಗೆ ಬಂದು ಅಳುತ್ತಿದ್ದಾಗ ವಿಷಯ ಗೊತ್ತಾಗಿ ಪೋಷಕರು ಕೊಪ್ಪ ಠಾಣೆಯಲ್ಲಿ ದೂರು ದಾಖಲಿಸಿದರು. ಬಾಲಕಿ ಪೊಲೀಸ್ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾಳೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.