ಮಳವಳ್ಳಿ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕಿರುಗಾವಲು ಬಳಿಯ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮನ ದೇವಸ್ಥಾನದಲ್ಲಿ ಗುರುವಾರ ಬೆಳಗಿನ ಜಾವ ಕಳವು ಮಾಡಿ, ಹೊರಾಂಗಣದ ಗೋಡೆಯ ಮೇಲೆ ಇಸ್ಲಾಂ ಧರ್ಮದ ಚಿಹ್ನೆ ಬರೆಯಲಾಗಿದೆ.
ಗ್ರಾಮದ ಮುಖ್ಯರಸ್ತೆಯಲ್ಲಿರುವ ದೇವಸ್ಥಾನದ ಬೀಗ ಹೊಡೆದು ಕಳವು ಮಾಡಲಾಗಿದೆ. ಗ್ರಾಮದ ದಂಡಿನ ಮಾರಮ್ಮನ ದೇವಸ್ಥಾನಕ್ಕೂ ನುಗ್ಗಿ, ಕಳವು ಯತ್ನ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದರು. ಬೆರಳಚ್ಚು ತಜ್ಞರು ಪರಿಶೀಲಿಸಿದರು. ಕಿರುಗಾವಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.