ADVERTISEMENT

ಮದ್ದೂರಿನಲ್ಲಿ ರೇಣುಕಾ ಯಲ್ಲಮ್ಮದೇವಿ ಜಾತ್ರೆ 27ರಂದು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 3:22 IST
Last Updated 24 ಫೆಬ್ರುವರಿ 2021, 3:22 IST
ರೇಣುಕಾ ಯಲ್ಲಮ್ಮ ದೇವಿ
ರೇಣುಕಾ ಯಲ್ಲಮ್ಮ ದೇವಿ   

ಮದ್ದೂರು: ಪಟ್ಟಣದ ಹೊಳೆ ಬೀದಿಯಲ್ಲಿರುವ, ಚಿಕ್ಕಸವದತ್ತಿ ಎಂದು ಪ್ರಸಿದ್ಧಿಪಡೆದಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 49ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 22ನೇ ವರ್ಷದ ಮಹಾಚಂಡಿಕಾ ಹೋಮವು ಇದೇ ಫೆ. 27ರಂದು ನಡೆಯಲಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ 26ರಂದು ಸಂಜೆ 6.00 ಗಂಟೆಗೆ ಮೂಲದೇವರ ಅನುಜ್ಞೆ, ಭೂಶಾಂತಿ, ಗಣಪತಿ ಪುಜೆ, ಸ್ವಸ್ತಿವಾಚನ, ಪಂಚಗವ್ಯಾರಾಧನೆ, ದೇವನಾಂದಿ, ಮಹಾಮಂಗಳಾರತಿ, ಫೆ. 27 ರಂದು ಶನಿವಾರ ಭರತ ಹುಣ್ಣಿಮೆ ಪ್ರಯುಕ್ತ ಬೆಳಿಗ್ಗೆ ಸುಪ್ರಭಾತ ಸೇವೆ, ಗಣಪತಿ ಪ್ರಾರ್ಥನೆ, ರಕ್ಷಾಬಂಧನ, ಶ್ರೀ ರೇಣುಕಾ ಯಲ್ಲಮ್ಮ ದೇವಿಯವರಿಗೆ ಅಭಿಷೇಕ ಮತ್ತು ಅಲಂಕಾರ ಬೆಳಿಗ್ಗೆ 7.30 ರಿಂದ ದೇವಿಗೆ ಶುಭ ಮೀನ ಲಗ್ನದಲ್ಲಿ ಚಂಡಿಯಾಗ,ಬೆಳಿಗ್ಗೆ 11.30 ಕ್ಕೆ ಮಹಾಪೂರ್ಣಾಹುತಿ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಮಹಿಳೆಯರಿಂದ ತಂಬಿಟ್ಟಿನ ಆರತಿ ನಡೆಯಲಿದೆ. ನಂತರಮತ್ತು ತೀರ್ಥಪ್ರಸಾದ, ಮಧ್ಯಾಹ್ನ ದೇವಸ್ಥಾನದ ಆವರಣದಲ್ಲಿ ಮಹಾಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.

ರಾತ್ರಿ 8.10ಕ್ಕೆ ದೇವಿಯ ಮುತ್ತಿನ ಪಲ್ಲಕ್ಕಿ ಉತ್ಸವವನ್ನು ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಆರಂಭಗೊಳ್ಳಲಿದ್ದು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೂಜಾಕುಣಿತ, ವಾದ್ಯಗೋಷ್ಠಿಗಳೊಂದಿಗೆ ನಡೆಯುವುದು ಎಂದು ದೇವಸ್ಥಾನದ ಸೇವಾ ಟ್ರಸ್ಟ್ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.