ADVERTISEMENT

ನೌಕರರ ಸಮಸ್ಯಗೆ ಸ್ಪಂದನೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 13:10 IST
Last Updated 3 ಮಾರ್ಚ್ 2024, 13:10 IST
ಪಾಂಡವಪುರದಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಗುಂಡು ಎಸೆಯುವುದರ ಮೂಲಕ ಉದ್ಫಾಟಿಸಿದರು. ತಹಶೀಲ್ದಾರ್ ಶ್ರೇಯಸ್, ಬಿಇಒ ಬಿ.ಚಂದ್ರಶೇಖರ್ ಭಾಗವಹಿಸಿದ್ದರು
ಪಾಂಡವಪುರದಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಗುಂಡು ಎಸೆಯುವುದರ ಮೂಲಕ ಉದ್ಫಾಟಿಸಿದರು. ತಹಶೀಲ್ದಾರ್ ಶ್ರೇಯಸ್, ಬಿಇಒ ಬಿ.ಚಂದ್ರಶೇಖರ್ ಭಾಗವಹಿಸಿದ್ದರು   

ಪಾಂಡವಪುರ: ‘ಸರ್ಕಾರಿ ಇಲಾಖೆಗಳಲ್ಲಿ ಶೇಕಡಾ 50ರಷ್ಟು ಸಿಬ್ಬಂದಿಗಳ ಕೊರತೆ ಇದ್ದರೂ, ಅಧಿಕಾರಿಗಳು ಮತ್ತು ನೌಕರರು ಹೆಚ್ಚಿನ ಹೊಣೆಗಾರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಫಾಟಿಸಿ ಅವರು ಮಾತನಾಡಿದರು.

‘1982 ಜನಸಂಖ್ಯಾ ಆಧಾರಕ್ಕೆ ಅನುಗುಣವಾಗಿ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ನೌಕರರ ಸಮಸ್ಯೆ ನನಗೆ ಅರ್ಥವಾಗಿದೆ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯವಶ್ಯಕ. ಸರ್ಕಾರಿ ನೌಕರರ ಸಮಸ್ಯೆಗೆ ಸ್ಪಂದಿಸಲಾಗುವುದು’ ಎಂದರು.

ADVERTISEMENT

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಂಘದ ಅಧ್ಯಕ್ಷ ಡಾ.ಸಿ.ಎ.ಅರವಿಂದ್ ಮಾತನಾಡಿ, ‘ಆರೋಗ್ಯ ಕಾಪಾಡಿಕೊಂಡರೆ ಕೆಲಸದ ಒತ್ತಡಗಳನ್ನು ನಿವಾರಿಸಿಕೊಳ್ಳಬಹುದು. ಪ್ರತಿಯೊಬ್ಬರು ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕಿದೆ. ಕ್ರೀಡೆ ದೈಹಿಕ ಬಲ ಹೆಚ್ಚಿಸುವ ಜತೆಗೆ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುತ್ತದೆ’ ಎಂದು ಹೇಳಿದರು.

ತಹಶೀಲ್ದಾರ್ ಜಿ.ಎಸ್.ಶ್ರೇಯಸ್, ಬಿಇಒ ಬಿ.ಚಂದ್ರಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೇಶವ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಕರುಣಾಕರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.