
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಬೆಳಕವಾಡಿ: ಸಮೀಪದ ಕಿರಗಸೂರು ಗ್ರಾಮದ ನಿವೃತ್ತ ಮುಖ್ಯಶಿಕ್ಷಕ ಬಸವರಾಜು (72) ಅವರು ಕಗ್ಗಲೀಪುರ ರಸ್ತೆಯ ಮೂಲಕ ಮಂಗಳವಾರ ರಾತ್ರಿ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ಬಸವರಾಜು ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಅಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಅಪಘಾತ ಮಾಡಿ ಪರಾರಿಯಾಗಿರುವ ವಾಹನ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮೃತರ ಪತ್ನಿ ರಾಜಮಣಿ ದೂರು ನೀಡಿದ್ದು, ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.