ADVERTISEMENT

ಸಾವಿರಕ್ಕೂ ಹೆಚ್ಚು ಜನರ ಪಿಂಡಪ್ರದಾನ - ಕಂದಾಯ ಸಚಿವ ಆರ್‌.ಅಶೋಕ್‌ ಭಾಗಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 11:27 IST
Last Updated 4 ಅಕ್ಟೋಬರ್ 2021, 11:27 IST
ಪಿಂಡಪ್ರದಾನ  ಕಾರ್ಯ ಶ್ರೀರಂಗಪಟ್ಟಣ ತಾಲ್ಲೂಕು ಗೋಸಾಯಿಘಾಟ್‌ ಬಳಿಯ ಕಾವೇರಿ ನದಿ ತೀರದಲ್ಲಿ ಸೋಮವಾರ ನೆರವೇರಿತು.
ಪಿಂಡಪ್ರದಾನ ಕಾರ್ಯ ಶ್ರೀರಂಗಪಟ್ಟಣ ತಾಲ್ಲೂಕು ಗೋಸಾಯಿಘಾಟ್‌ ಬಳಿಯ ಕಾವೇರಿ ನದಿ ತೀರದಲ್ಲಿ ಸೋಮವಾರ ನೆರವೇರಿತು.   

ಮಂಡ್ಯ: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕು ಗೋಸಾಯಿಘಾಟ್‌ ಬಳಿಯ ಕಾವೇರಿ ನದಿಯಂದಿ ಕೋವಿಡ್‌ನಿಂದ ಮೃತಪಟ್ಟವರ ಸಾವಿರಕ್ಕೂ ಹೆಚ್ಚು ಜನರ ಪಿಂಡಪ್ರದಾನ ಕಾರ್ಯವನ್ನು ಸೋಮವಾರ ನೆರವೇರಿಸಲಾಯಿತು.

ಕಂದಾಯ ಸಚಿವ ಆರ್‌.ಅಶೋಕ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ಭಾನುಪ್ರಕಾಶ್‌ ಶರ್ಮಾ ಧಾರ್ಮಿಕ ವಿಧಿವಿಧಾನ ಪೂರೈಸಿದರು.

ಸಾಮೂಹಿಕ ಪ್ರೇತ ಸಂಸ್ಕಾರ, ನಾರಾಯಣ ಬಲಿಪೂಜೆ, ತಿಲಕ ತರ್ಪಣದೊಂದಿಗೆ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು.

ADVERTISEMENT

ಮಳವಳ್ಳಿ ತಾಲ್ಲೂಕು, ಬೆಳಕವಾಡಿ ಸಮೀಪದ ಕಾವೇರಿ ನದಿ ತೀರದಲ್ಲಿ ಜೂನ್‌ 2ರಂದು ಅಸ್ಥಿ ವಿಸರ್ಜನೆ ಮಾಡಲಾಗಿತ್ತು. ಮಹಾಲಯ ಅಮವಾಸ್ಯೆ ಹಿನ್ನೆಲೆಯಲ್ಲಿ ಪಿಂಡಪ್ರದಾನ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಆರ್‌.ಅಶೋಕ್‌ ‘ಕೋವಿಡ್‌ನಿಂದ ಮೃತಪಟ್ಟವನ್ನು ಗೌರವಯುತವಾಗಿ ಸಂಸ್ಕಾರ ಮಾಡಲು ಸರ್ಕಾರ ಮುಂದಾಗಿದೆ. ಯಾರೂ ಅನಾಥರಲ್ಲ, ಬದುಕಿದ್ದಾಗ ಎಲ್ಲರೂ ಸಮಾಜಕ್ಕಾಗಿ ಕೆಲಸ ಮಾಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲೆಂದು ಪ್ರಾರ್ಥಿಸಿ ಸಾಮೂಹಿಕವಾಗಿ ಅಸ್ಥಿ ವಿಸರ್ಜನೆ ಮಾಡಲಾಗಿದೆ’ ಎಂದರು.

ಪಿಂಡಪ್ರದಾನ ಕಾರ್ಯ ನೆರವೇರಿಸಿದ ಸಚಿವ ಆರ್.ಅಶೋಕ್
ಸಾಮೂಹಿಕ ಪ್ರೇತ ಸಂಸ್ಕಾರ, ನಾರಾಯಣ ಬಲಿಪೂಜೆ, ತಿಲಕ ತರ್ಪಣದೊಂದಿಗೆ ನದಿಯಲ್ಲಿ ಪಿಂಡಪ್ರದಾನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.