ಮಂಡ್ಯ: ಇಲ್ಲಿಯ ಮಂಡ್ಯ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಹುದ್ದೆಗೆ ಕೆಎಎಸ್ ಅಧಿಕಾರಿ ರೂಪಶ್ರೀ ಕೆ. ಅವರನ್ನು ವರ್ಗಾವಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ.
ರೂಪಶ್ರೀ ಅವರು ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿರುವ ವೀಣಾ ಬಿ.ಎನ್. ಅವರು ಇದುವರೆಗೆ ಮಂಡ್ಯ ವಿವಿಯ ಕುಲಸಚಿವರು (ಆಡಳಿತ) ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.