ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕೆ.ಶೆಟ್ಟಹಳ್ಳಿಯ ಗಾನವಿ ನಂದೀಶ್ ಅವರು ಉತ್ತರಾಖಂಡ್‌ನ ಹರಿದ್ವಾರದಲ್ಲಿ ಇದೇ 27ರಿಂದ ಫೆ.2ರವರೆಗೆ ನಡೆಯಲಿರುವ ಮಹಿಳೆಯರ 38ನೇ ರಾಷ್ಟ್ರೀಯ ಕಬಡ್ಡಿ ಟೂರ್ನಿಗೆ ಆಯ್ಕೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಆಯೋಜಿಸಿದ್ದ ಕಬಡ್ಡಿ ತರಬೇತಿ ಶಿಬಿರದಲ್ಲಿ ಗಾನವಿ ಪಾಲ್ಗೊಂಡಿದ್ದು, ಜ.24ರಂದು ಕರ್ನಾಟಕ ತಂಡದೊಂದಿಗೆ ಬೆಂಗಳೂರಿನಿಂದ ಹರಿದ್ವಾರಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆ ಕಾರ್ಯದರ್ಶಿ ಕೆ. ಗೌರೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.