ಮಳವಳ್ಳಿ: ತಾಲ್ಲೂಕಿನ ಬಂಡೂರು ಸಾರ್ವಜನಿಕ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಅನಾರೋಗ್ಯ ಪೀಡಿತರಾಗಿರುವ ತಳಗವಾದಿ ಗ್ರಾಮದ ಪಾಪಣ್ಣ ಅವರಿಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ₹2 ಲಕ್ಷ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಪಾಪಣ್ಣ ಅವರ ಮನೆಗೆ ಭೇಟಿ ನೀಡಿದ ಹಿರಿಯ ವಿದ್ಯಾರ್ಥಿಗಳು ಅವರ ಮಗಳ ವಿದ್ಯಾಭ್ಯಾಸಕ್ಕೆ ಜಂಟಿ ಖಾತೆ ತೆರೆಯುವಂತೆ ಸಲಹೆ ನೀಡಿ ಚೆಕ್ ಅನ್ನು ಹಸ್ತಾಂತರಿಸಿದರು.
ಬಂಡೂರು ಸಾರ್ವಜನಿಕ ಪ್ರೌಢಶಾಲೆಯಲ್ಲಿ 28 ವರ್ಷ ಸೇವೆ ಸಲ್ಲಿಸಿದ್ದರು. ಹಿರಿಯ ವಿದ್ಯಾರ್ಥಿಗಳ ಸಲಹೆಯಂತೆ ಆರ್ಥಿಕ ಸಹಾಯ ಮಾಡಲಾಗಿದೆ. ಈ ಹಣವನ್ನು ಪಾಪಣ್ಣ ಅವರ ಮಗಳ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವಂತೆ ಹೇಳಲಾಗಿದೆ’ ಎಂದು ಹಿರಿಯ ವಿದ್ಯಾರ್ಥಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.