ಮಂಡ್ಯ: ‘ರಾಜ್ಯದಾದ್ಯಂತ ಪಂಚ ಗ್ಯಾರಂಟಿಗಳು ಎರಡು ವರ್ಷಗಳನ್ನು ಪೂರೈಸಿದೆ. ಶಕ್ತಿ ಯೋಜನೆಯೊಂದಕ್ಕೆ ₹12,669 ಕೋಟಿ ಅನುದಾನವನ್ನು ನೀಡಲಾಗಿದೆ’ ಎಂದು ಮಂಡ್ಯ ಶಾಸಕ ಪಿ. ರವಿಕುಮಾರ್ ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
‘ಶಕ್ತಿ ಯೋಜನೆ ರಾಜ್ಯದ ಅನೇಕ ಮಹಿಳೆಯರಿಗೆ ಸಹಕಾರಿಯಾಗಿದೆ. ರಾಜ್ಯದಾದ್ಯಂತ ಶಕ್ತಿ ಯೋಜನೆಯಡಿ ₹500 ಕೋಟಿ ಮೌಲ್ಯದ ಉಚಿತ ಟಿಕೆಟ್‌ಗಳನ್ನು ಮಹಿಳೆಯರಿಗೆ ವಿತರಿಸಲಾಗಿದೆ. ಇದೊಂದು ಐತಿಹಾಸಿಕ ದಾಖಲೆ ಎಂದರೆ ತಪ್ಪಾಗಲಾರದು’ ಎಂದು ಅಭಿಪ್ರಾಯಪಟ್ಟರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳು ರಾಜ್ಯದ ಸಾವಿರಾರು ಕುಟುಂಬಗಳಿಗೆ ಆಸರೆಯಾಗಿವೆ. ಗೃಹಿಣಿಯರು ಗೃಹಲಕ್ಷ್ಮಿ ಹಣ ಶೇಖರಿಸಿ ಹಸು, ಅಂಗಡಿ, ಲೈಬ್ರರಿ ಮತ್ತು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಗೆ ಹಾಗೂ ಮುಂತಾದ ಕಾರಣಗಳಿಗೆ ಸಮರ್ಪಕವಾಗಿ ಉಯೋಗಿಸಿಕೊಂಡಿದ್ದಾರೆ ಎಂದರು.
ನಂತರ ಫಲಾನುಭವಿಗಳೊಂದಿಗೆ ಫೋಟೊ ತೆಗೆಸಿಕೊಂಡರು. ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿದ ಪ್ರಯಾಣಿಕರಿಗೆ ಸಿಹಿ ವಿತರಿಸುವ ಮೂಲಕ ಸಂಭ್ರಮಿಸಿದರು. ನಂತರ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ, ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ. ನಾಗರಾಜು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪ್ರಶಾಂತ್ ಬಾಬು, ಮಂಡ್ಯ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರುದ್ರಪ್ಪ, ವಿಭಾಗೀಯ ಸಂಚಾರ ಅಧಿಕಾರಿ ಪರಮೇಶ್ವರಪ್ಪ, ಡಿಪೊ ಮ್ಯಾನೇಜರ್ ರಘು ಪಾಲ್ಗೊಂಡಿದ್ದರು.
‘ಶಕ್ತಿ’ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ ಬಡಕುಟುಂಬಗಳಿಗೆ ‘ಪಂಚ ಗ್ಯಾರಂಟಿ’ ಆಸರೆ ಬಸ್ ನಿಲ್ದಾಣದಲ್ಲಿ ಸಿಹಿ ವಿತರಿಸಿ, ಸಂಭ್ರಮಾಚರಣೆ
ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಬಡ ಜನರ ಜೀವನ ಮಟ್ಟವನ್ನು ಸುಧಾರಿಸುವುದು. ಆದ್ದರಿಂದಲೇ ಪಂಚ ಗ್ಯಾರಂಟಿಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಯಿತು– ಪಿ.ರವಿಕುಮಾರ್ ಮಂಡ್ಯ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.