ADVERTISEMENT

ಮಾರಸಿಂಗನಹಳ್ಳಿ: ಸಿದ್ದರಾಮಯ್ಯ ಕಟೌಟ್‌ಗೆ ಕ್ಷೀರಾಭಿಷೇಕ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 5:39 IST
Last Updated 7 ಜನವರಿ 2026, 5:39 IST
ಶ್ರೀರಂಗಪಟ್ಟಣ ತಾಲ್ಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಸಿದ್ದರಾಮಯ್ಯ ಅವರ ಕಟೌಟ್‌ಗೆ ಅಭಿಮಾನಿಗಳು ಕ್ಷೀರಾಭಿಷೇಕ ಮಾಡಿ, ಸಾರ್ವಜನಿಕರಿಗೆ ಹಾಲು ವಿತರಿಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಸಿದ್ದರಾಮಯ್ಯ ಅವರ ಕಟೌಟ್‌ಗೆ ಅಭಿಮಾನಿಗಳು ಕ್ಷೀರಾಭಿಷೇಕ ಮಾಡಿ, ಸಾರ್ವಜನಿಕರಿಗೆ ಹಾಲು ವಿತರಿಸಿದರು   

ಶ್ರೀರಂಗಪಟ್ಟಣ: ರಾಜ್ಯದಲ್ಲಿ ಸುದೀರ್ಘ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯ ಅವರು, ಡಿ.ದೇವರಾಜ ಅರಸು ಅವರ ದಾಖಲೆ ಮುರಿದಿದ್ದಾರೆ ಎಂದು ತಾಲ್ಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಅವರ ಕಟೌಟ್‌ಗೆ ಮಂಗಳವಾರ ಕ್ಷೀರಾಭಿಷೇಕ ಮಾಡಿದರು.

ಗ್ರಾಮದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಸಾರ್ವಜನಿಕರಿಗೆ ಬಿಸಿಹಾಲು, ಬೆಳಗಿನ ಉಪಾಹಾರ ವಿತರಣೆ ಮಾಡಿದರು. ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮುಖಂಡ ಮಂಜುನಾಥ್ ಮಾತನಾಡಿ, ‘ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್ ಮಂಡಿಸಿಯೂ ದಾಖಲೆ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.

ADVERTISEMENT

ಗ್ರಾ.ಪಂ.ಸದಸ್ಯ ರಮೇಶ್, ಮುಖಂಡರಾದ ಮನು, ರವಿ, ಕುಮಾರ್, ಭೈರ, ಕಾಳೇಗೌಡ, ಪುಟ್ಟಬಸವೇಗೌಡ ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.