
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದೀರ್ಘವಾಗಿ ಜನಮೆಚ್ಚಿದ ಅಡಳಿತ ನಡೆಸುತ್ತಾ ಬಡವರು ಹಾಗೂ ಶೋಷಿತರ ದನಿಯಾಗಿದ್ದಾರೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಶ್ಲಾಘಿಸಿದರು.
ನಗರದ ಕನಕ ಭವನದಲ್ಲಿ ಜಿಲ್ಲಾ ಕುರುಬರ ಸಂಘ ಶೋಷಿತ ಹಾಗೂ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ನಂತರ ಸಿದ್ದರಾಮಯ್ಯ ಅವರು ಸುದೀರ್ಘ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಿದ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಅವಕಾಶವನ್ನು ಮುಂದುವರಿಸಲಿ, ರಾಜ್ಯದ ಜನರ ಸೇವೆ ಮಾಡುವ ಅವಕಾಶ ಇನ್ನೂ ಹೆಚ್ಚಿನ ರೀತಿ ದೊರೆಯಲಿ ಎಂದು ಆಶಿಸಿದರು.
ರಾಜ್ಯ ಜವಳಿ ಮತ್ತು ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಹಾಗೂ ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಲ್.ಸುರೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕರಡಿಕೊಪ್ಪಲು ಪುಟ್ಟಸ್ವಾಮಿಗೌಡ, ಮುಖಂಡರಾದ ಎಲ್.ಸಂದೇಶ್, ಸಾವಿತ್ರಮ್ಮ, ಶ್ರೀನಿವಾಸ್, ಸಿ.ಎಂ. ದ್ಯಾವಪ್ಪ ಭಾಗವಹಿಸಿದ್ದರು.
ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ವಿಶೇಷ ಪೂಜೆ
ಮಳವಳ್ಳಿ: ಸಿದ್ದರಾಮಯ್ಯ ಅವರು ಹೆಚ್ಚು ಕಾಲ ರಾಜ್ಯದ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಪಟ್ಟಣದ ಹೊರವಲಯದ ಮಾರೇಹಳ್ಳಿ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಪರವಾಗಿ ಘೋಷಣೆ ಕೂಗಿದರು. ನಂತರ ಪಟ್ಟಣದ ಆನಂತ್ ರಾಂ ವೃತ್ತದ ಬಳಿ ಸಿಹಿ ಹಂಚಿ ಸಂಭ್ರಮಿಸಿದರು.
ಮನ್ ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಮಾತನಾಡಿ, 'ಬಡ ಜನರ ಪರವಾದ ಚಿಂತನೆಗಳೊಂದಿಗೆ ಬಡವರಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿರುವ ಏಕೈಕ ಮುಖ್ಯಮಂತ್ರಿ ಅಂದರೆ ಅದು ಸಿದ್ದರಾಮಯ್ಯ
ಮಾತ್ರ. ಮುಂದಿನ ದಿನಗಳಲ್ಲಿ ಅವರಿಂದ ಮತ್ತಷ್ಟು ಜನಪರ ಕಾರ್ಯಗಳು ಜಾರಿಯಾಗಲಿ' ಎಂದು ಆಶಿಸಿದರು.
ಟಿಎಪಿಸಿಎಂಎಸ್ ನಿರ್ದೇಶಕ ಬಿ.ಪುಟ್ಟಬಸವಯ್ಯ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಟಿಎಪಿಸಿಎಂಎಸ್ ನಿರ್ದೇಶಕ ಬಿ.ಪುಟ್ಟಬಸವಯ್ಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಣ್ಣ ಮಾತನಾಡಿದರು.
ಮನ್ ಮುಲ್ ನಿರ್ದೇಶಕ ಡಿ.ಕೃಷ್ಣಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ಕೆಪಿಸಿಸಿ ಸದಸ್ಯ ಸಿದ್ದೇಗೌಡ, ಮುಖಂಡರಾದ ಚಂದ್ರಕುಮಾರ್, ಸಿ.ಮಾಧು, ಪಿ.ಮಾದೇಶ್, ನಾಗರಾಜು, ದಿಲೀಪ್ ಕುಮಾರ್, ಶಶಿ ರಾಜ್, ಬಿ.ಮಹದೇವು. ಬಸಪ್ಪ, ಎಂ.ಮಾದಯ್ಯ, ಸಿ.ಎಂ. ವೇದಮೂರ್ತಿ, ರವೀಂದ್ರ, ವಿಜಯ್ ಕುಮಾರ್. ನೂರುಲ್ಲಾ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.