ADVERTISEMENT

ಮಳವಳ್ಳಿ: ಚೊಟ್ಟನಹಳ್ಳಿ ಗ್ರಾ.ಪಂ.ಗೆ ಸಿದ್ದರಾಜು ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 27 ಮೇ 2025, 11:35 IST
Last Updated 27 ಮೇ 2025, 11:35 IST
ಮಳವಳ್ಳಿ ತಾಲ್ಲೂಕಿನ ಚೊಟ್ಟನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್‌ ಬೆಂಬಲಿತ ಸಿದ್ದರಾಜು (ಸಿಮೆಂಟ್ ಸಿದ್ದು) ಹಾಗೂ ಜಿ.ಎಂ.ಲಕ್ಷ್ಮಿ ಅವರನ್ನು ಕಾಂಗ್ರೆಸ್ ಮುಖಂಡರು ಹಾಗೂ ಗ್ರಾ.ಪಂ ಸದಸ್ಯರು ಅಭಿನಂದಿಸಿದರು
ಮಳವಳ್ಳಿ ತಾಲ್ಲೂಕಿನ ಚೊಟ್ಟನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್‌ ಬೆಂಬಲಿತ ಸಿದ್ದರಾಜು (ಸಿಮೆಂಟ್ ಸಿದ್ದು) ಹಾಗೂ ಜಿ.ಎಂ.ಲಕ್ಷ್ಮಿ ಅವರನ್ನು ಕಾಂಗ್ರೆಸ್ ಮುಖಂಡರು ಹಾಗೂ ಗ್ರಾ.ಪಂ ಸದಸ್ಯರು ಅಭಿನಂದಿಸಿದರು   

ಮಳವಳ್ಳಿ: ತಾಲ್ಲೂಕಿನ ಬೊಪ್ಪೇಗೌಡನಪುರ (ಬಿಜಿಪುರ) ಹೋಬಳಿಯ ಚೊಟ್ಟನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಿದ್ದರಾಜು (ಸಿಮೆಂಟ್ ಸಿದ್ದು) ಹಾಗೂ ಉಪಾಧ್ಯಕ್ಷರಾಗಿ ಜಿ.ಎಂ.ಲಕ್ಷ್ಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಮಹದೇವಸ್ವಾಮಿ ಅವರು ಆಯ್ಕೆಯನ್ನು ಘೋಷಿಸಿದರು.

ನೂತನ ಅಧ್ಯಕ್ಷ ಸಿದ್ದರಾಜು ಮಾತನಾಡಿ, ‘ಪಂಚಾಯಿತಿಯ 13 ಸದಸ್ಯರ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು, ಎಲ್ಲ ಗ್ರಾಮಗಳಿಗೆ ಮೂಲ ಸೌಕರ್ಯಗಳು ಹಾಗೂ ಸರ್ಕಾರದ ವಿವಿಧ ಸವಲತ್ತುಗಳನ್ನು ಒದಗಿಸುವುದು ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.

ADVERTISEMENT

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಮಾತನಾಡಿ, ‘ಕಳೆದ ಕೆಲ ತಿಂಗಳ ಹಿಂದೆ ಸಿದ್ದರಾಜು ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಶಾಸಕರು, ಸದಸ್ಯರು ಹಾಗೂ ಪಕ್ಷದ ಮುಖಂಡರ ಸಲಹೆಯಂತೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ’ ಎಂದು ಹಾರೈಸಿದರು.

ಗ್ರಾಮ ಪಂಚಾಯಿತಿಯ ಸದಸ್ಯರು, ಮುಖಂಡರಾದ ರಾಚೇಗೌಡ, ಮಹದೇವು, ಬಸವರಾಜು, ಶಶಿ, ಶಿವರಾಜು, ನಾಡಗೌಡ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.