ADVERTISEMENT

ಶ್ರೀರಂಗಪಟ್ಟಣ ‌| ಬೈಕ್‌ ಹಳ್ಳಕ್ಕೆ ಬಿದ್ದು ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 14:03 IST
Last Updated 11 ಜೂನ್ 2024, 14:03 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಶ್ರೀರಂಗಪಟ್ಟಣ: ತಾಲ್ಲೂಕಿನ ಮರಳಾಗಾಲ ಬಳಿ ಸೋಮವಾರ ತಡರಾತ್ರಿ ನಿಯಂತ್ರಣ ತಪ್ಪಿ ಬೈಕ್‌ ಹಳ್ಳಕ್ಕೆ ಬಿದ್ದು, ಸವಾರ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಅರಕೆರೆ ಗ್ರಾಮದ ಸಿದ್ದರಾಮೇಗೌಡ ಅವರ ಮಗ ಮಧು (32) ಮೃತ ವ್ಯಕ್ತಿ. ಅವರು ಅರಕೆರೆಯಿಂದ ಶ್ರೀರಂಗಪಟ್ಟಣಕ್ಕೆ ಬರುವ ವೇಳೆ ಮರಳಾಗಾಲ ಸಮೀಪದ ಆಂಜನೇಯಸ್ವಾಮಿ ದೇವಾಲಯದ ಬಳಿಯ ತಿರುವಿನಲ್ಲಿ ಬೈಕ್‌ ಹಳ್ಳಕ್ಕೆ ಬಿದ್ದಿದೆ. ಘಟನೆಯಲ್ಲಿ ಮಧು ಹೆಲ್ಮೆಟ್‌ ಧರಿಸದ ಕಾರಣ ಅವರ ತಲೆಗೆ ಗಂಭೀರವಾಗಿ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.