ADVERTISEMENT

ಶ್ರೀರಂಗಪಟ್ಟಣ ದಸರಾ ಲಾಂಛನ ಬಿಡುಗಡೆ: ಉದ್ಘಾಟನೆಗೆ ಟಿ.ಎಸ್‌.ನಾಗಾಭರಣ ಆಯ್ಕೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 13:22 IST
Last Updated 12 ಸೆಪ್ಟೆಂಬರ್ 2025, 13:22 IST
<div class="paragraphs"><p>ದಸರಾ ಲಾಂಛನ</p></div>

ದಸರಾ ಲಾಂಛನ

   

ಮಂಡ್ಯ: ಶ್ರೀರಂಗಪಟ್ಟಣ ದಸರಾ–2025 ಕಾರ್ಯಕ್ರಮವನ್ನು ಈ ಬಾರಿ ಸೆ.25ರಿಂದ ಸೆ.28ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಅದರ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಬಿಡುಗಡೆಗೊಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಮಾತನಾಡಿ, ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್. ನಾಗಾಭರಣ ಅವರು ಉದ್ಘಾಟಿಸಲಿದ್ದಾರೆ ಎಂದರು.

ADVERTISEMENT

ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ.25ರಂದು ಉದ್ಘಾಟನೆ ಹಾಗೂ ಸೆ.28ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.