
ಪ್ರಜಾವಾಣಿ ವಾರ್ತೆ
ಬಂಧನ
ಶ್ರೀರಂಗಪಟ್ಟಣ: ನಿಷೇಧಿತ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರನ್ನು ಪಟ್ಟಣ ಠಾಣೆ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ.
ಮೈಸೂರಿನ ಕೆಸರೆ ಬಡಾವಣೆ ನಿವಾಸಿಗಳಾದ ಹಫೀಜ್, ಸಾಧಿಕ್, ಇರ್ಫಾನ್ ಮತ್ತು ಸದ್ದಾಂ ಎಂಬವರನ್ನು ಗಾಂಜಾ ಸೇವನೆ ಆರೋಪದ ಮೇಲೆ ಬಂಧಿಸಲಾಗಿದೆ. ಪಟ್ಟಣದ ಮುಸ್ಲಿಂ ವಸತಿ ಶಾಲೆ ಸಮೀಪ, ದರ್ಗಾದ ಬಳಿ ಗಾಂಜಾ ಸೇವಿಸುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸಿಪಿಐ ಬಿ.ಜಿ. ಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.