ADVERTISEMENT

ಶ್ರೀರಂಗಪಟ್ಟಣ: ಬಸ್‌ ಇಳಿಯುವಾಗ ಮಹಿಳೆಯ ಚಿನ್ನದ ಸರ ಕತ್ತರಿಸಿದ್ದ ಮಹಿಳೆ ಬಂಧನ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 5:08 IST
Last Updated 26 ಡಿಸೆಂಬರ್ 2025, 5:08 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಶ್ರೀರಂಗಪಟ್ಟಣ: ಬಸ್‌ ಇಳಿಯುವಾಗ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕತ್ತರಿಸಿದ್ದ ಆಂಧ್ರಪ್ರದೇಶ ಮೂಲದ ಮಹಿಳೆಯನ್ನು ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಲಕ್ಷ್ಮಿಪುರ ಗ್ರಾಮದ ಮಾಧವಿ ಎಂಬಾಕೆಯನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿದ್ದು, ಬುಧವಾರ ಸಂಜೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ADVERTISEMENT

ಪಾಂಡವಪುರ ತಾಲ್ಲೂಕು ತಿಮ್ಮನಕೊಪ್ಪಲು ಗ್ರಾಮದ ಸೌಜನ್ಯ ಎಂಬಾಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮೈಸೂರಿನಿಂದ ಬಂದು ಪಟ್ಟಣದಲ್ಲಿ ಇಳಿಯುವಾಗ ಮಾಧವಿ ಚಿನ್ನದ ಸರ ಕತ್ತರಿಸಿದ್ದರು. ಓಡುತ್ತಿದ್ದ ಮಾಧವಿಯನ್ನು ಸ್ಥಳೀಯರು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿ ಮಹಿಳೆ ವಿವಿಧೆಡೆ ಕಳವು ಮಾಡಿದ್ದ 70 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಟ್ಟಣ ಠಾಣೆ ಸಿಪಿಐ ಬಿ.ಜಿ. ಕುಮಾರ್‌ ತಿಳಿಸಿದ್ದಾರೆ.

ಗಾಂಜಾ ಸೇವನೆ: ಬಂಧನ–ತಾಲ್ಲೂಕಿನ ಕರಿಘಟ್ಟ ಪ್ರಕೃತಿ ತಾಣದಲ್ಲಿ ನಿಷೇಧಿತ ಗಾಂ‌ಜಾ ಸೇವಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿ ನಿವಾಸಿ ಮಹಮದ್‌ ಕೈಫ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಪಟ್ಟಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.