
ಶ್ರೀರಂಗಪಟ್ಟಣ: ತಾಲ್ಲೂಕಿನ ಪಾಲಹಳ್ಳಿ ಬಳಿ ಜ.7ರಂದು ನಡೆದ ಅಪಘಾತದಲ್ಲಿ ಮೃತಪಟ್ಟ ಶಿಕ್ಷಕಿಯರಾದ ಎ.ಎಸ್. ಮಂಜುಳಾ ಮತ್ತು ವಿ. ನಾಗರತ್ನ ಅವರಿಗೆ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಪಟ್ಟಣದಲ್ಲಿ ಶನಿವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಡಿ.ಎನ್. ಲೋಕೇಶ್ ಮಾತನಾಡಿ, ಶಿಕ್ಷಕಿಯರ ಅಕಾಲಿಕ ಮರಣದಿಂದ ಶಿಕ್ಷಣ ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ಪ್ರತಿಭಾವಂತ ಹಾಗೂ ಸ್ನೇಹಮಯಿ ವ್ಯಕ್ತಿತ್ವದ ಎ.ಎಸ್. ಮಂಜುಳಾ ಮತ್ತು ವಿ. ನಾಗರತ್ನ ಅವರ ಅಗಲಿಕೆ ದುಃಖದಾಯಕ ಸಂಗತಿ ಎಂದು ಕಂಬನಿ ಮಿಡಿದರು.
ವಿದ್ಯಾಂಗ ಇಲಾಖಾ ನೌಕರರ ಸಹಕಾರ ಸಂಘದ ಅಧ್ಯಕ್ಷ ಟಿ.ಪಿ. ಕುಮಾರ್ ಮಾತನಾಡಿ, ವಾಹನಗಳಲ್ಲಿ ಪ್ರಯಾಣ ಮಾಡುವಾಗ ಶಿಕ್ಷಕಿಯರು ತಾಳ್ಮೆ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ. ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಮಹೇಶ್ ಮಾತನಾಡಿದರು. ವಿದ್ಯಾ ಇಲಾಖಾ ನೌಕರರ ಸಹಕಾರ ಸಂಘದ ಉಪಾಧ್ಯಕ್ಷ ಗವಿಸಿದ್ದೇಗೌಡ, ಮಾಜಿ ಅಧ್ಯಕ್ಷ ಎನ್.ಎನ್. ಪ್ರಕಾಶ್, ಶಿಕ್ಷಣ ಸಂಯೋಜಕ ನಂಜುಂಡಾಚಾರ್, ಜೆ. ರಮೇಶ್, ರಾಜು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.