ಕೆಆರ್‌ಎಸ್
ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ಭಾನುವಾರ ರಾತ್ರಿ 13,760 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದ ನೀರಿನ ಮಟ್ಟ 119.80 ಅಡಿಗೆ ತಲುಪಿದೆ. ಸೋಮವಾರ ಬೆಳಿಗ್ಗೆ ವೇಳೆಗೆ ನೀರಿನ ಮಟ್ಟ 120 ಅಡಿ ದಾಟಲಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದಲ್ಲಿ 42.7 ಟಿಎಂಸಿ (ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯ49.45 ಟಿಎಂಸಿ) ಅಡಿ ನೀರು ಸಂಗ್ರಹವಾಗಿದೆ. ಜೂನ್ 16ರಂದು 111 ಅಡಿ ನೀರಿತ್ತು. ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಅಣೆಕಟ್ಟೆಗೆ 6 ದಿನಗಳಲ್ಲಿ 9 ಅಡಿಗಳಷ್ಟು ನೀರು ಹರಿದುಬಂದಿದೆ. 124.80 ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯ ಭರ್ತಿಗೆ 5 ಅಡಿ ಬಾಕಿ ಇದೆ. 1,400 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 87.60 ಅಡಿ (14.5 ಟಿಎಂಸಿ) ನೀರಿತ್ತು. 1300 ಕ್ಯೂಸೆಕ್ ಒಳ ಹರಿವು ಹಾಗೂ 930 ಕ್ಯೂಸೆಕ್ ಹೊರ ಹರಿವಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.