ಮದ್ದೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಕಟ್ಟಡಗಳ ಬದಲಿ ಸೇರಿದಂತೆ ಸುಮಾರು 50 ನೂತನ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದ್ದೇನೆ ಎಂದು ಶಾಸಕ ಕೆ. ಎಂ ಉದಯ್ ತಿಳಿಸಿದರು.
ತಾಲ್ಲೂಕು ಕೊಕ್ಕರೆ ಬೆಳ್ಳೂರು ಸಮೀಪದ ಅರುವನಹಳ್ಳಿ ಗ್ರಾಮದಲ್ಲಿ ಮಂಗಳವಾರ ₹20 ಲಕ್ಷ ವೆಚ್ಚದ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಾಗೂ ₹12 ಲಕ್ಷ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಈಗಾಗಲೇ ಗ್ರಾಮೀಣ ಭಾಗದ ರಸ್ತೆ, ಚರಂಡಿ, ನೀರಾವರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.
ಮನ್ ಮುಲ್ ನಿರ್ದೇಶಕ ಹರೀಶ್, ಮುಖಂಡರಾದ ಅರುವನಹಳ್ಳಿ ಸಿದ್ದರಾಜು, ಕೂಳಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆಂಪರಾಜು, ಗಿರಿಸಿದ್ದರಾಜು, ಅಪ್ಪರಾಜು, ಕೀರ್ತಿರಾಜು ನಾಗೇಶ್, ಅನಂತರಾಜು, ಎಸ್ಸಿ–ಎಸ್ಟಿ ಜಾಗೃತಿ ಸಮಿತಿ ಸದಸ್ಯರಾದ ಚಿದಂಬರಮೂರ್ತಿ, ಅಮೀನ್ ಶಿವಲಿಂಗಯ್ಯ ಸೇರಿದಂತೆ ಹಲವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.