ಪ್ರಾತಿನಿಧಿಕ ಚಿತ್ರ
ಶ್ರೀರಂಗಪಟ್ಟಣ: ಪಟ್ಟಣದ ಪಶ್ಚಿಮವಾಹಿನಿ ಬಡಾವಣೆ ನಿವಾಸಿ ಆನಂದ್ ಎಂಬವರ ಪುತ್ರಿ, ಮೈಸೂರು ಶೇಷಾದ್ರಿಪುರಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜೀವಿತಾ (17) ಶುಕ್ರವಾರ ಸಂಜೆ ಆತ್ಮೆಹತ್ಯೆ ಮಾಡಿಕೊಂಡಿದ್ದಾಳೆ.
ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಖಿನ್ನತೆಗೆ ಒಳಗಾಗಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.