ಕಿಕ್ಕೇರಿ: ‘ಮಕ್ಕಳು ಸ್ಥಳೀಯ ಇತಿಹಾಸ ತಿಳಿಯಲು ಮುಂದಾಗಬೇಕು’ ಎಂದು ಚೌಡೇನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಧನಲಕ್ಷ್ಮಿ ಶಂಭುಗೌಡ ಹೇಳಿದರು.
ಹೋಬಳಿಯ ಚೌಡೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ, ಗ್ರಂಥಾಲಯ ಹಾಗೂ ಅರಿವು ಕೇಂದ್ರಗಳಿಂದ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಕ್ಕಳು ಸ್ಥಳೀಯ ಇತಿಹಾಸ, ದೇಶಿ ಕ್ರೀಡೆ ಮತ್ತಿತರ ಚಟುವಟಿಕೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.
ಪಿಡಿಒ ನಟರಾಜಮೂರ್ತಿ ಮಾತನಾಡಿ, ‘ಮಕ್ಕಳು ಕ್ರಿಯಾಶೀಲವಾಗಿ ಪಾಲ್ಗೊಳ್ಳಬೇಕು. ಪಠ್ಯದಾಚೆಗೂ ಅನೇಕ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಬೇಕು’ ಎಂದರು.
ಗ್ರಾ.ಪಂ. ಉಪಾಧ್ಯಕ್ಷೆ ವಿನೋದ ಹರೀಶ್, ನೋಡಲ್ ಅಧಿಕಾರಿ ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಹರೀಶ್, ಶಿಕ್ಷಕರಾದ ಶಿವನಂಜೇಗೌಡ, ಶ್ರುತಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.