ADVERTISEMENT

ಸಾಗಾಣಿಕೆ ವೆಚ್ಚ ರೈತರಿಗೆ ವಿಧಿಸಬೇಡಿ

ಸರ್ಕಾರ ಮತ್ತು ಜಿಲ್ಲಾಡಳಿತ ಕಬ್ಬು ಬೆಳೆಗಾರರ ಹಿತ ಕಾಯಲಿದೆ: ಜಿಲ್ಲಾಧಿಕಾರಿ ಕುಮಾರ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 3:16 IST
Last Updated 9 ಆಗಸ್ಟ್ 2025, 3:16 IST
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ ಮಾಲೀಕರ ನಡುವೆ ಇದ್ದ ಗೊಂದಲವನ್ನು ‌ಪರಿಹರಿಸಲು ಗುರುವಾರ ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶಾಸಕ ದರ್ಶನ್‌ ಪುಟ್ಟಣ್ಣಯ್ಯ, ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್, ರಾಜ್ಯ ಲಾರಿ ಮಾಲೀಕರ ಅಧ್ಯಕ್ಷ ಷಣ್ಮುಗಂ ಪಾಲ್ಗೊಂಡಿದ್ದರು 
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ ಮಾಲೀಕರ ನಡುವೆ ಇದ್ದ ಗೊಂದಲವನ್ನು ‌ಪರಿಹರಿಸಲು ಗುರುವಾರ ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶಾಸಕ ದರ್ಶನ್‌ ಪುಟ್ಟಣ್ಣಯ್ಯ, ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್, ರಾಜ್ಯ ಲಾರಿ ಮಾಲೀಕರ ಅಧ್ಯಕ್ಷ ಷಣ್ಮುಗಂ ಪಾಲ್ಗೊಂಡಿದ್ದರು    

ಮಂಡ್ಯ: ಜಿಲ್ಲೆಯಲ್ಲಿ ಕಬ್ಬು ಕಟಾವು ನಂತರ ಸಕ್ಕರೆ ಕಾರ್ಖಾನೆಗೆ ಸಾಗಾಣಿಕೆ ಮಾಡುವ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಬ್ಬು ಸಾಗಾಣಿಕೆ ವೆಚ್ಚ ಕುರಿತು ರೈತರು ಹಾಗೂ ಲಾರಿ ಮಾಲೀಕರ ನಡುವೆ ಇದ್ದ ಗೊಂದಲವನ್ನು ‌ಪರಿಹರಿಸಲು ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಹಾಗೂ ಜಿಲ್ಲಾಡಳಿತ ರೈತರ ಹಿತ ಕಾಯುವ ಕೆಲಸ ಮಾಡುತ್ತದೆ ಎಂದರು.

ಕಬ್ಬು ಸಾಗಾಣಿಕಾ ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡುವ ಕಬ್ಬು ಖರೀದಿ ಹಣದಲ್ಲಿ ಕಟಾವು ಮಾಡುವಂತಿಲ್ಲ. ಸಕ್ಕರೆ ಕಾರ್ಖಾನೆಗಳು ಲಾರಿ ಮಾಲೀಕರಿಗೆ ಕಬ್ಬು ಸಾಗಾಣಿಕೆ ವೆಚ್ಚವನ್ನು ಭರಿಸುವ ಬಗ್ಗೆ ಚರ್ಚಿಸಿ ರೈತರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದರು‌.

ADVERTISEMENT

ಜಿಲ್ಲಾ ಲಾರಿ ಮಾಲೀಕರು ಲಾರಿ ಆಯುಕ್ತಾಲಯದಿಂದ ನಿಗದಿಪಡಿಸಿರುವ ದರವನ್ನು ಯಾವುದೇ ರೈತರ ಮೇಲೆ ಏರುವಂತಿಲ್ಲ. ರೈತರ ಹಿತರಕ್ಷಣೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಲಾರಿ ಮಾಲೀಕರು ಹಾಗೂ ಸಕ್ಕರೆ ಕಾರ್ಖಾನೆಗಳು ಜೊತೆಗೂಡಿ ಸಮನ್ವಯ ಸಾಧಿಸಿ ವೆಚ್ಚವನ್ನು ಭರಿಸಿ, ಸಕ್ಕರೆ ಕಾರ್ಖಾನೆಗಳು ತಮ್ಮ ಮುಖ್ಯಸ್ಥರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಿ ಎಂದರು.

ಸಭೆಯಲ್ಲಿ ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮೈಷುಗರ್‌ ವ್ಯವಸ್ಥಾಪಕ ನಿರ್ದೇಶಕ ಮಂಗಲ್‌ ದಾಸ್‌, ರಾಜ್ಯ ಲಾರಿ ಮಾಲೀಕರ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಜಿಲ್ಲಾ ಲಾರಿ ಮಾಲೀಕರ ಅಧ್ಯಕ್ಷ ವೇಣುಗೋಪಾಲ್ ಇದ್ದರು. 

ಟ್ರ್ಯಾಕ್ಟರ್‌ನಲ್ಲಿ ಕಬ್ಬು ಸಾಗಣೆ: ಲಾರಿ ಮಾಲೀಕರ ವಿರೋಧ ಮಂಡ್ಯ: ‘ಟ್ರ್ಯಾಕ್ಟರ್‌ಗಳ ಎಂಜಿನ್‌ಗಳಿಗೆ ಎರಡು ಅಥವಾ ಮೂರು ಟ್ರೈಲರ್‌ಗಳನ್ನು ಅಳವಡಿಸಿಕೊಂಡು ಕಬ್ಬು ತುಂಬಿಕೊಂಡು ಹೋಗುವುದನ್ನು ನಿಲ್ಲಿಸಬೇಕು. ಸಾರಿಗೆ ಅಧಿಕಾರಿಗಳು ಟ್ರ್ಯಾಕ್ಟರ್‌ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ದಕ್ಷಿಣ ಕರ್ನಾಟಕ ಲಾರಿ ಮಾಲೀಕರ ಸಂಘದ ವೇಣುಗೋಪಾಲ್‌ ಎಚ್ಚರಿಕೆ ನೀಡಿದರು. ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ ಲಾರಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಲಾರಿ ಸಾಗಾಣಿಕೆ ವೆಚ್ಚವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.  ಲಾರಿ ಮಾಲೀಕರ ಅಸೋಸಿಯೇಷನ್‌ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್‌.ಷಣ್ಮುಗಪ್ಪ ಮಾತನಾಡಿ ರೈತರ ಹಿತದೃಷ್ಟಿಯಿಂದ ನಾವು ತೊಂದರೆ ಕೊಡಲು ಇಷ್ಟ ಪಡುವುದಿಲ್ಲ. ಟ್ರ್ಯಾಕ್ಟರ್‌ನಲ್ಲಿ ಕಟಾವು ಮಾಡಿದ ಕಬ್ಬನ್ನು ತುಂಬಿಕೊಂಡು ಹೋಗುತ್ತಿರುವುದರಿಂದ ನಮ್ಮ ಲಾರಿಗಳಿಗೆ ನಷ್ಟವಾಗುತ್ತಿದೆ ಇದನ್ನು ತಪ್ಪಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.