ಜೆಡಿಎಸ್ ಹಂಚಿಕೊಂಡಿರುವ ಪೋಸ್ಟರ್
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆಯ ವಿಶ್ವವಿಖ್ಯಾತ ‘ಬೃಂದಾವನ’ದ ಪ್ರವೇಶ ಶುಲ್ಕವನ್ನು ದುಪ್ಪಟ್ಟು ಹೆಚ್ಚಿಸಿ ಪ್ರವಾಸಿಗರ ಸುಲಿಗೆ ಮಾಡಲಾಗುತ್ತಿದೆ ಎಂದು ಜೆಡಿಎಸ್ ಪಕ್ಷವು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದೆ.
ಮೇ 2ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ಬೃಂದಾವನ ಪ್ರವೇಶ ದರ ದುಪ್ಪಟ್ಟು’ ವಿಶೇಷ ವರದಿಯ ಇ–ಪೇಪರ್ ಇಮೇಜ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ರಾಜ್ಯದಲ್ಲಿರುವ ‘ದರಾಸುರ ಸರ್ಕಾರ’ದ ದರ ಏರಿಕೆ ಭೂತ ಈಗ ಪ್ರವಾಸೋದ್ಯಮ ಕ್ಷೇತ್ರಕ್ಕೂ ಕಾಲಿಟ್ಟಿದೆ ಎಂದು ಜರಿದಿದೆ.
ಕೆಆರ್‌ಎಸ್ ಉದ್ಯಾನದ ಪ್ರವೇಶ ಶುಲ್ಕ, ವಾಹನ ಪಾರ್ಕಿಂಗ್, ಟೋಲ್ ಶುಲ್ಕ ಏರಿಸಿ, ಪ್ರವಾಸಿಗರ ಜೇಬಿಗೆ ಕತ್ತರಿ ಹಾಕುತ್ತಿರುವ ‘ಪಿಕ್ ಪಾಕೆಟ್’ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಪೋಸ್ಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.