ಮಂಡ್ಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಎಂ.ಅಶ್ವಿನಿ ಅವರನ್ನು ವರ್ಗಾವಣೆ ಮಾಡಿದ್ದು ಅವರ ಜಾಗಕ್ಕೆ ಐಪಿಎಸ್ ಅಧಿಕಾರಿ ಸುಮನ್ ಡಿ ಪನ್ನೇಕರ್ ಅವರನ್ನು ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಮನ್ ಡಿ ಪನ್ನೇಕರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂ.ಅಶ್ವಿನಿ ಅವರನ್ನು ಸಹಾಯಕ ಐಜಿಪಿಯಾಗಿ ಬೆಂಗಳೂರು ಮುಖ್ಯ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.