ADVERTISEMENT

‘ಕ್ರೀಡೆ: ಶ್ರೇಷ್ಠ ಸ್ಥಾನ ಪಡೆಯುವುದೇ ಗುರಿ’

ಕ್ರೀಡಾ ಪ್ರತಿಭಾನ್ವೇಷಣೆ ಕಾರ್ಯಕ್ರಮ; ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 5:43 IST
Last Updated 27 ಸೆಪ್ಟೆಂಬರ್ 2021, 5:43 IST
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಪ್ರತಿಭಾನ್ವೇಷಣೆ ಅಭಿಯಾನವನ್ನು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಪ್ರತಿಭಾನ್ವೇಷಣೆ ಅಭಿಯಾನವನ್ನು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು   

ನಾಗಮಂಗಲ: ರಾಜ್ಯದಲ್ಲಿ ಕ್ರೀಡಾಪಟು ಗಳನ್ನು ಪ್ರೋತ್ಸಾಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿ ಕ್ರೀಡೆಯಲ್ಲಿ ರಾಜ್ಯವನ್ನು ಶ್ರೇಷ್ಠ ಮಟ್ಟಕ್ಕೆ ಕೊಂಡೊಯ್ಯುವುದೇ ಮುಖ್ಯ ಗುರಿಯಾಗಿದೆ ಎಂದು ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಸಚಿವ ನಾರಾಯಣ ಗೌಡ ಹೇಳಿದರು.

ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಜಿ.ಪಂ‌ ಮಂಡ್ಯ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆದಿಚುಂಚನಗಿರಿ ಮಠದ ಸಹಯೋ ಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರದಿಂದ ಜಿಲ್ಲೆಯ ಕ್ರೀಡಾ ಪ್ರತಿಭಾನ್ವೇಷಣಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಲು ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ಕ್ರೀಡಾ ವಿಜ್ಞಾನ ಕೇಂದ್ರ ಪ್ರಾರಂಭಿಸಲಾಗಿದೆ ಎಂದರು.

ADVERTISEMENT

ಕೆ.ಆರ್.ಪೇಟೆಯಲ್ಲಿ ಖೇಲೋ ಇಂಡಿಯಾ ಸ್ಥಾಪಿಸುವ ಇಚ್ಛೆ ಇತ್ತು. ಆದರೆ, ಅದರ ಸಮರ್ಪಕ ನಿರ್ವಹಣೆ ಕಷ್ಟವಾಗಿರುವುದರಿಂದ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಸುಮಾರು 40 ಎಕರೆ ಪ್ರದೇಶದಲ್ಲಿ ಖೇಲೋ ಇಂಡಿಯಾ ಸ್ಥಾಪಿಸಲು ಸಿದ್ಧತೆ ಮಾಡಿಕೊಳ್ಳ ಲಾಗುತ್ತಿದೆ. ಕ್ರೀಡಾ ವಿಜ್ಞಾನ ಕೇಂದ್ರದಲ್ಲಿ ತರಬೇತಿಗೆ ಆಯ್ಕೆಯಾಗುವ ಎಲ್ಲ ಕ್ರೀಡಾಪಟು ಗಳಿಗೆ ದೈಹಿಕ, ಮಾನಸಿಕ ಸದೃಢತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ನೀಡಲು ಸುಮಾರು 40 ತಜ್ಞರ ತಂಡ ವಿದೆ. ಕ್ರೀಡಾ ಮಾದರಿಯ ಆಹಾರಗಳನ್ನು ಕೇಂದ್ರ ದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಸಾನ್ನಿಧ್ಯ ವಹಿಸಿ‌ದ್ದ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಕ್ರೀಡಾಕೂಟದಲ್ಲಿ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ 24 ತಂಡಗಳು ಭಾಗವಹಿಸಿದ್ದವು. ಕ್ರೀಡಾ ಕೂಟದ ನಂತರ ವಿವಿಧ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ನೀಡಲಾಯಿತು.

ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಮಂಗಳನಾಥ ಸ್ವಾಮೀಜಿ, ಗುರುನಾಥ ಸ್ವಾಮೀಜಿ, ಧರ್ಮಪಾಲನಾಥ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ, ಬಿಇಒ ಮಹದೇವಪ್ಪ, ತಹಶೀಲ್ದಾರ್ ಕುಂಞಿ ಅಹಮದ್, ಯುವ ಸಬಲೀಕರಣ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಅನಿತಾ, ಜಿ.ಪಂ ಮುಖ್ಯಲೆಕ್ಕಾಧಿಕಾರಿ ಕವಿತಾ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.