ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಸಿ: ದಿನೇಶ್ ಗೂಳಿಗೌಡ

​ಪ್ರಜಾವಾಣಿ ವಾರ್ತೆ
Published 25 ಮೇ 2022, 4:23 IST
Last Updated 25 ಮೇ 2022, 4:23 IST
ಎಸ್. ಗುರುಚರಣ್ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಅಭಿನಂದಿಸಲಾಯಿತು. ದಿನೇಶ್ ಗೂಳಿಗೌಡ, ಕದಲೂರು ರಾಮಕೃಷ್ಣ, ಪಿ.ಸಂದರ್ಶ್‌, ದೇಶಹಳ್ಳಿ ಆರ್.ಮೋಹನ್ ಕುಮಾರ್, ಕಂಠಿ ಸುರೇಶ್, ಸಿ.ನಾಗೇಗೌಡ, ಕೆ.ಆರ್.ಮಹೇಶ್, ಶಂಕರಲಿಂಗೇಗೌಡ, ನಿಡಘಟ್ಟ ಪ್ರಕಾಶ್ ಇದ್ದರು
ಎಸ್. ಗುರುಚರಣ್ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಅಭಿನಂದಿಸಲಾಯಿತು. ದಿನೇಶ್ ಗೂಳಿಗೌಡ, ಕದಲೂರು ರಾಮಕೃಷ್ಣ, ಪಿ.ಸಂದರ್ಶ್‌, ದೇಶಹಳ್ಳಿ ಆರ್.ಮೋಹನ್ ಕುಮಾರ್, ಕಂಠಿ ಸುರೇಶ್, ಸಿ.ನಾಗೇಗೌಡ, ಕೆ.ಆರ್.ಮಹೇಶ್, ಶಂಕರಲಿಂಗೇಗೌಡ, ನಿಡಘಟ್ಟ ಪ್ರಕಾಶ್ ಇದ್ದರು   

ಮದ್ದೂರು: ಸಮೀಪದ ಸೋಮನಹಳ್ಳಿ ಯಲ್ಲಿರುವ ಕೆಪಿಸಿಸಿ ಸದಸ್ಯ ಎಸ್. ಗುರುಚರಣ್ ರವರ ನಿವಾಸದಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮ ಪಂಚಾಯಿತಿ ಉಪ ಚುನಾವಣೆಗಳಲ್ಲಿ ಜಯ ಗಳಿಸಿದ ಕಾಂಗ್ರೆಸ್‌ ಬೆಂಬಲಿತ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮಂಗಳವಾರ ನಡೆಯಿತು.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ‘ಜೂನ್‌ನಲ್ಲಿ ನಡೆಯಲಿರುವ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಧು ಜಿ.ಮಾದೇಗೌಡ ಅವರಿಗೆ ಮತ ನೀಡಿ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ಮಧು ಅವರ ತಂದೆ ಜಿ.ಮಾದೇಗೌಡರು ರೈತರ ಪರ ಹಾಗೂ ಜನಪರವಾಗಿ ಹೋರಾಟ ಮಾಡಿದ್ದರು. ಜಿಲ್ಲೆಗೆ ಅನನ್ಯ ಕೊಡುಗೆ ನೀಡಿದ್ದಾರೆ. ಹೀಗಾಗಿ, ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಬೇಕು’ ಎಂದು ಕೋರಿದರು.

ADVERTISEMENT

ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಮಾತನಾಡಿ, ‘ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗುತ್ತಿದೆ. ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಮತ್ತಷ್ಟು ಶ್ರಮಿಸಬೇಕು. ವಿಧಾನ ಪರಿಷತ್‌ ಹಾಲಿ ಸದಸ್ಯ ಮರಿತಿಬ್ಬೇಗೌಡರು ಮಧು ಅವರನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸವಿದೆ’ ಎಂದು ತಿಳಿಸಿದರು.

ನಿಲುವಾಗಿಲು, ದೇಶಹಳ್ಳಿ, ತೈಲೂರು ಗ್ರಾಮಗಳ ಸಹಕಾರ ಸಂಘಗಳು ಹಾಗೂ ಕದಲೂರು, ಅಣ್ಣೂರು ಗ್ರಾ.ಪಂ ಉಪ ಚುನಾವಣೆಯಲ್ಲಿ ಜಯಗಳಿಸಿದ ಸದಸ್ಯರನ್ನು ಅಭಿನಂದಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್‌, ಕಿಸಾನ್‌ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್ ಕುಮಾರ್, ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಕಂಠಿ ಸುರೇಶ್, ತಾ.ಪಂ ಮಾಜಿ ಅಧ್ಯಕ್ಷ ಸಿ.ನಾಗೇಗೌಡ, ಸದಸ್ಯ ಕೆ.ಆರ್.ಮಹೇಶ್, ಶಂಕರಲಿಂಗೇಗೌಡ, ನಿಡಘಟ್ಟ ಪ್ರಕಾಶ್, ಪುರಸಭಾ ಮಾಜಿ ಅಧ್ಯಕ್ಷ ಎಂ‌.ಪಿ.ಅಮರ್ ಬಾಬು, ಅರುಣ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.