ಕೆ.ಆರ್.ಪೇಟೆ: ಪಟ್ಟಣದಲ್ಲಿ ಬುದ್ಧ ಬಸವ ಅಂಬೇಡ್ಕರ್ ಯೋಗ ಕೇಂದ್ರ , ರೋಟರಿ ಕ್ಲಬ್ ಮತ್ತು ಆರ್.ಟಿ.ಓ ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ಸಹಯೋಗದಲ್ಲಿ ರಥ ಸಪ್ತಮಿ ಅಂಗವಾಗಿ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.
ಚುಮು ಚುಮು ಚಳಿಯ ನಡುವೆಯೂ ಸೂರ್ಯೋದಯಕ್ಕೆ ಸರಿಯಾಗಿ ನೂರಾರು ಯೋಗಪಟುಗಳು ಯೋಗ ಗುರು ಎಸ್.ಎಂ.ಅಲ್ಲಮಪ್ರಭು ನೇತೃತ್ವದಲ್ಲಿ ಸೂರ್ಯನಿಗೆ 108 ಸೂರ್ಯ ನಮಸ್ಕಾರ ಮಾಡುವ ಮೂಲಕ ಸಮಭ್ರಮದ ರಥಸಪ್ತಮಿ ಆಚರಿಸಿದರು.
ಆರ್‌ಟಿಒ ಮಲ್ಲಿಕಾರ್ಜುನ್ ಮಾತನಾಡಿ, ‘ಆರೋಗ್ಯವಂತ ಬದುಕು ಮತ್ತು ಸದೃಡ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿನಿತ್ಯ ಯೋಗ ಮಾಡಬೇಕು. ಅತ್ಯಂತ ಸುಲಭ ವಿಧಾನವಾದ ಸೂರ್ಯ ನಮಸ್ಕಾರವನ್ನು ಅಳವಡಿಸಿಕೊಳ್ಳಬೇಕು’ ಎಂದರು.
ಶಿಕ್ಷಣ ಸಂಯೋಜಕ ವೀರಭದ್ರಯ್ಯ, ಯೋಗಪಟು ಅಲ್ಲಮಪ್ರಭು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.