ADVERTISEMENT

ನಾಗಮಂಗಲ| ದೇಶದ ಸದೃಢತೆಗೆ ವಿವೇಕಾನಂದರ ಆದರ್ಶ ಪಾಲಿಸಿ: ವಿಜಯಕುಮಾರ್

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 4:02 IST
Last Updated 13 ಜನವರಿ 2026, 4:02 IST
ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಜಿ.ಬೊಮ್ಮನಹಳ್ಳಿ ವಿಜಯಕುಮಾರ್ ಉದ್ಘಾಟಿಸಿದರು
ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಜಿ.ಬೊಮ್ಮನಹಳ್ಳಿ ವಿಜಯಕುಮಾರ್ ಉದ್ಘಾಟಿಸಿದರು   

ನಾಗಮಂಗಲ: ಸ್ವಾಮಿ ವಿವೇಕಾನಂದರ ಆದರ್ಶವನ್ನು ಪಾಲಿಸಿ ದೇಶದ ಸದೃಢತೆಗೆ ನಿಮ್ಮ ಕೊಡುಗೆಯನ್ನು ನೀಡಿ ಎಂದು ಜಿ. ಬೊಮ್ಮನಹಳ್ಳಿ ವಿಜಯಕುಮಾರ್ ಅಭಿಪ್ರಾಯ ಪಟ್ಟರು.

ತಾಲ್ಲೂಕಿನ ಬಿ.ಜಿ ನಗರದ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯ, ಪಿಯು ಕಾಲೇಜು ಹಾಗೂ ಬಿಜಿಎಸ್ ಮಾಡಲ್ ಪಬ್ಲಿಕ್ ಶಾಲೆಯ ವತಿಯಿಂದ ಸೋಮವಾರ ಆಯೋಜಿಸಿದ್ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿ.ಇಡಿ ಪ್ರಶಿಕ್ಷಣಾರ್ಥಿ ಡಿ.ಆರ್.ವರ್ಷಿತ ಮತ್ತು 5ನೇ ತರಗತಿಯ ವಿದ್ಯಾರ್ಥಿನಿ ಶ್ರಾವಣಿ ಸ್ವಾಮಿ ವಿವೇಕಾನಂದ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಟಿ.ಎನ್. ಶಿಲ್ಪ  ರಾಷ್ಟ್ರೀಯ ಯುವ ದಿನದ ಹಿನ್ನೆಲೆ ವಿವರಿಸಿದರು.

ADVERTISEMENT

ಬಿಜಿಎಸ್ ಮಾಡೆಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ವಿ. ಪುಟ್ಟಸ್ವಾಮಿ, ಕಾರ್ಯಕ್ರಮ ಸಂಯೋಜಕ ಸಹಾಯಕ ಪ್ರಾಧ್ಯಾಪಕ ಬಿ. ಎನ್. ದೇವರಾಜು, ಸಹಾಯಕ ಪ್ರಾಧ್ಯಾಪಕರಾದ ಎ.ಎಚ್. ಗೋಪಾಲ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಸಿ.ಎಲ್. ಶಿವಣ್ಣ, ವಿ.ಲೋಕೇಶ್ ಕುಮಾರ್, ಪ್ರೊ.ಸೌಮ್ಯ, ಪ್ರೊ.ಎನ್.ಎಸ್.ದೇವಾನಂದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.