ADVERTISEMENT

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗಲಿ: ನಿಶ್ಚಲಾನಂದನಾಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:08 IST
Last Updated 24 ಫೆಬ್ರುವರಿ 2026, 7:08 IST
ಭಾರತೀನಗರದ ರಾಯಲ್ ಓಕ್ಸ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ‘ರಾಯಲ್ ಉತ್ಸವ 2026’ರ ಕಾರ್ಯಕ್ರಮದಲ್ಲಿ ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಅವರನ್ನು ಗೌರವಿಸಲಾಯಿತು
ಭಾರತೀನಗರದ ರಾಯಲ್ ಓಕ್ಸ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ‘ರಾಯಲ್ ಉತ್ಸವ 2026’ರ ಕಾರ್ಯಕ್ರಮದಲ್ಲಿ ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಅವರನ್ನು ಗೌರವಿಸಲಾಯಿತು   

ಭಾರತೀನಗರ: ‘ವಿದ್ಯಾವಂತರು ದೇಶದ ಆಸ್ತಿ, ಬಡವರ ಮಕ್ಕಳು ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಪಡೆಯುವುದು ಕಷ್ಟಸಾಧ್ಯವಾಗಿದೆ’ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.

ಇಲ್ಲಿಯ ರಾಯಲ್ ಓಕ್ಸ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ರಾಯಲ್ ಉತ್ಸವ 2026ರ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಗ್ರಾಮೀಣ ಬಡಜನರು ಬಹುತೇಕ ರೈತರಾಗಿದ್ದು, ದೇಶಕ್ಕೆ ಅನ್ನ ನೀಡುತ್ತಿದ್ದಾರೆ. ಆದರೆ ಅಂತಹವರ ಮಕ್ಕಳಿಗೆ ಸರಿಯಾದ ಶಿಕ್ಷಣ ಲಭಿಸುತ್ತಿಲ್ಲ, ಕಾರಣ ಇಂದಿನ ಶಿಕ್ಷಣ ವ್ಯವಹಾರವಾಗಿದೆ. ಹಾಗಾಗಿ ಬಡ ರೈತರ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗುವಂತಾಗಬೇಕು’ ಎಂದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕೆ.ಎಂ.ಉದಯ್, ‘ಹಿಂದೆ ತಮ್ಮ ಮಕ್ಕಳಿಗಾಗಿ ಆಸ್ತಿ ಸಂಪಾದಿಸಲಾಗುತ್ತಿತ್ತು. ಆದರೆ, ಇಂದು ಬದಲಾದ ಸನ್ನಿವೇಶದಲ್ಲಿ ಪೊಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನೇ ಆಸ್ತಿ ಎಂದುಕೊಳ್ಳುತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ.ಧನಂಜಯ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಕೆನರಾ ಬ್ಯಾಂಕ್‌ ಶಾಖಾ ವ್ಯವಸ್ಥಾಪಕ ಎಚ್.ಜಿ.ಸೋಮಪ್ಪ, ಜಿ.ಪಂ. ಮಾಜಿ ಸದಸ್ಯ ಎ.ಎಸ್.ರಾಜೀವ್, ಶಾಲೆಯ ಗೌರವಾಧ್ಯಕ್ಷ ಎಸ್.ನಾಗರಾಜು, ಅಧ್ಯಕ್ಷ ಡಿ.ಆರ್.ಶಿವರಾಜ್, ಕಾರ್ಯದರ್ಶಿ ಬಿ.ಆರ್.ಸುಮನ್, ಸಹಕಾರ್ಯದರ್ಶಿ ಸುಶ್ಮಿತಾ ಸುಮನ್, ಮುಖ್ಯ ಶಿಕ್ಷಕಿ ಡಿ.ಎಂ.ನಂದಿನಿ ಹಾಗೂ ಶಾಲೆಯ ನಿರ್ದೇಶಕರು ಉಪಸ್ಥಿತರಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.