ಕೆ.ಆರ್.ಪೇಟೆ: ತಾಲ್ಲೂಕಿನ ಟಿಎಪಿಸಿಎಂಎಸ್ ಸಂಸ್ಥೆಯ 14ಮಂದಿ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶನಿವಾರ 10 ನಾಮಪತ್ರಗಳೊಂದಿಗೆ, ಒಟ್ಟು 41ನಾಮಪತ್ರಗಳು ಸಲ್ಲಿಕೆಯಾಗಿವೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಜೆ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ ಎ.ತರಗತಿಯ 6ಸ್ಥಾನಗಳಿಗೆ 13 ನಾಮಪತ್ರಗಳು , ಬಿ.ತರಗತಿಯ 8ಸ್ಥಾನಗಳಿಗೆ 27 ನಾಮಪತ್ರಗಳು ಸಲ್ಲಿಕೆಯಾಗಿವೆ. 14 ಮಂದಿ ನಿರ್ದೇಶಕರ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ ಎಂದು ಟಿಎಪಿಸಿಎಂಎಸ್ ಚುನಾವಣಾಧಿಕಾರಿ ತಹಶೀಲ್ದಾರ್ ಎಸ್.ಯು.ಅಶೋಕ್ ತಿಳಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರಗಳನ್ನು ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಸಲ್ಲಿಸಿದರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ನೇತೃತ್ವದಲ್ಲಿ ಸಲ್ಲಿಸಿದರು. ರೈತರು ಮತ್ತು ಕೃಷಿ ಸದಸ್ಯರಿಂದ ಬಿ- ತರಗತಿಯ 8 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಸಹ ಚುನಾವಣಾಧಿಕಾರಿಯಾಗಿ ತಾಲ್ಲೂಕು ಚುನಾವಣಾ ಶಾಖೆಯ ಶಿರಸ್ತೇದಾರ್ ಕೆ.ಎಸ್.ಹರೀಶ್, ಟಿಎಪಿಸಿಎಂಎಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ಬೋರೇಗೌಡ, ರವಿಕುಮಾರ್ ಭಾಗವಹಿಸಿದ್ದರು.
ಮೂರೂ ಪಕ್ಷಗಳ ಪ್ರಮುಖರಾದ ಚೋಳೇನಹಳ್ಳಿ ಪುಟ್ಟಸ್ವಾಮೀಗೌಡ, ಶೀಳನೆರೆ ಮೋಹನ್, ಅಕ್ಕಿಹೆಬ್ಬಾಳು ರಘು, ವಿ.ಡಿ.ಹರೀಶ್, ಅಜಯ್ ರಾಮೇಗೌಡ, ಕೊರಟೀಕೆರೆ ದಿನೇಶ್ ಬಿ.ನಾಗೇಂದ್ರಕುಮಾರ್, ಹರಳಹಳ್ಳಿ ವಿಶ್ವನಾಥ್, ಕಿಕ್ಕೇರಿ ಸುರೇಶ್, ಎಸ್.ಅಂಬರೀಶ್, ಎ.ಬಿ.ಕುಮಾರ್, ಕಬ್ಬಲಗೆರೆಪುರ ಪುಟ್ಟಸ್ವಾಮೀಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.