ADVERTISEMENT

ಮಂಡ್ಯ | ಶಿಕ್ಷಕರು ಅಧ್ಯಯನ ಶೀಲರಾಗಿರಲಿ: ಪ್ರೊ.ಜಯಪ್ರಕಾಶಗೌಡ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 2:30 IST
Last Updated 6 ಸೆಪ್ಟೆಂಬರ್ 2025, 2:30 IST
ಮಂಡ್ಯ ನಗರದ ಹರ್ಡೀಕರ್‌ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಾಧಕ ಶಿಕ್ಷಕರಿಗೆ ‘ಆದರ್ಶ ಶಿಕ್ಷಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು
ಮಂಡ್ಯ ನಗರದ ಹರ್ಡೀಕರ್‌ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಾಧಕ ಶಿಕ್ಷಕರಿಗೆ ‘ಆದರ್ಶ ಶಿಕ್ಷಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು   

ಮಂಡ್ಯ: ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳು ಸಿಗಬೇಕಾದರೆ ಶಿಕ್ಷಕರಾದವರು ಸದಾ ಅಧ್ಯಯನ ಶೀಲರಾಗಬೇಕು ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಅಭಿಪ್ರಾಯಪಟ್ಟರು.

ನಗರದ ಹರ್ಡೀಕರ್‌ ಭವನದಲ್ಲಿ ಅಸೋಷಿಯೇಷನ್‌ ಆಫ್‌ ಅಲಯನ್ಸ್‌ ಸಂಸ್ಥೆ ಇಂಟರ್‌ ನ್ಯಾಷನಲ್‌ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಪಾತ್ರ ಸಮಾಜದಲ್ಲಿ ಪ್ರಮುಖವಾಗಿದೆ. ಏಕೆಂದರೆ, ದೇಶದ ಭವಿಷ್ಯದ ಪ್ರಜೆಗಳನ್ನು ಹುಟ್ಟು ಹಾಕುವವರು ಶಿಕ್ಷಕರೇ ಆಗಿದ್ದಾರೆ. ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಅಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಶಿಕ್ಷಕರ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ರಾಜ್ಯಪಾಲ ಅಲಯನ್ಸ್ ಎಚ್.ಮಾದೇಗೌಡ ಅಧ್ಯಕ್ಷತೆ ವಹಿಸಿದ್ದರು. ಸಾಧಕ ಶಿಕ್ಷಕರಿಗೆ ‘ಆದರ್ಶ ಶಿಕ್ಷಕ’ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸೌತ್ ಮಲ್ಟಿಪಲ್ ಕೌನ್ಸಿಲ್ ಉಪಾಧ್ಯಕ್ಷ ಕೆ.ಟಿ. ಹನುಮಂತು, ಭಾರತ ಸೇವಾ ದಳದ ಕಾರ್ಯದರ್ಶಿ ಜಿ.ವಿ. ನಾಗರಾಜು, ಶಿಕ್ಷಕ ಕೆ.ಆರ್. ಶಶಿಧರ, ಅಲಯನ್ಸ್ ಸಂಸ್ಥೆಯ ಕೆ.ಎಸ್. ಚಂದ್ರಶೇಖರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿ.ಎಸ್. ನಾಗರಾಜು, ಪ್ರತಿಭಾಂಜಲಿ ಡೇವಿಡ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.