ADVERTISEMENT

ಬಿಸಿಲಿನ ತಾಪ: ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ನೆರಳಿನಲ್ಲಿ ಇರಲು ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 13:29 IST
Last Updated 6 ಏಪ್ರಿಲ್ 2024, 13:29 IST
ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಬಳಿಯ ಹಕ್ಕಿ–ಪಿಕ್ಕಿ ಜನರ ಕಾಲೊನಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪದ ಪರಿಣಾಮಗಳ ಬಗ್ಗೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ. ಬೆನ್ನೂರ ಮಾತನಾಡಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಬಳಿಯ ಹಕ್ಕಿ–ಪಿಕ್ಕಿ ಜನರ ಕಾಲೊನಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪದ ಪರಿಣಾಮಗಳ ಬಗ್ಗೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ. ಬೆನ್ನೂರ ಮಾತನಾಡಿದರು   

ಶ್ರೀರಂಗಪಟ್ಟಣ: ‘ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೆಳಿಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಜನರು ನೆರಳಿನಲ್ಲೇ ಇರಬೇಕು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ. ಬೆನ್ನೂರ ಸಲಹೆ ನೀಡಿದರು.

ತಾಲ್ಲೂಕಿನ ಚನ್ನಹಳ್ಳಿ ಬಳಿಯ ಹಕ್ಕಿ–ಪಿಕ್ಕಿ ಜನರ ಕಾಲೊನಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಶನಿವಾರ ಬಿಸಿಲಿನ ತಾಪದ ಪರಿಣಾಮಗಳ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ತೆಳುವಾದ ಮತ್ತು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಬೇಕು. ಕಾಲ ಕಾಲಕ್ಕೆ ನೀರು ಕುಡಿಯಬೇಕು. ಬಿಸಿನಲ್ಲಿ ಹೊರಗೆ ಹೋಗುವಾಗ ಕನ್ನಡ, ಛತ್ತ್ರಿ, ಟೋಪಿ, ಪಾದರಕ್ಷೆ ಧರಿಸಬೇಕು. ನಿಂಬೆ ಇತರ ಹಣ್ಣಿನ ರಸ ಹಾಗೂ ಮಜ್ಜಿಗೆ ಸೇವಿಸಬೇಕು. ಮೂರ್ಛೆ ಅಥವಾ ಅನಾರೋಗ್ಯ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಗೆ ತೆರಳಬೇಕು’ ಎಂದು ತಿಳಿಸಿದರು.

ADVERTISEMENT

ಬಿಸಿಲಿನ ತಾಪದಿಂದ ಚರ್ಮದ ತುರಿಕೆ, ಚರ್ಮ ಒಣಗುವುದು, ಕೆಂಪಾಗುವುದು, ಅಲರ್ಜಿ, ತೀವ್ರ ಜ್ವರದಂತ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಗಳಿಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎನ್‌. ಕೃಷ್ಣೇಗೌಡ, ಮುಖಂಡರಾದ ಬಿ. ಕುಮಾರ್‌, ಹಳ್ಳಿಬಾಬು, ಸುಮಂತ್‌, ವೆಂಕಟೇಶ್‌, ರುಕೇಶ್‌, ಬಾಷಾ, ಗೋಪಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.