ADVERTISEMENT

ಕೆಆರ್‌ಎಸ್ ಜಲಾಶಯದಿಂದ 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2022, 9:27 IST
Last Updated 9 ಜುಲೈ 2022, 9:27 IST
ಕೆಆರ್‌ಎಸ್ ಜಲಾಶಯದಿಂದ 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ಕೆಆರ್‌ಎಸ್ ಜಲಾಶಯದಿಂದ 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ   

ಮಂಡ್ಯ: ಕೆಆರ್‌ಎಸ್ ಜಲಾಶಯ ಗರಿಷ್ಠ ಮಟ್ಟದತ್ತ ತಲುಪುತ್ತಿದ್ದು ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಶನಿವಾರ ಮಧ್ಯಾಹ್ನ 10 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 35 ಸಾವಿರ ಕ್ಯುಸೆಕ್ ದಾಟಿದೆ. ಶನಿವಾರ ಮಧ್ಯಾಹ್ನ ಜಲಾಶಯದ ನೀರಿನ ಮಟ್ಟ122 ಅಡಿಗೆ ತಲುಪಿದೆ. ಭರ್ತಿಗೆ 2.80 ಅಡಿ ಬಾಕಿ ಉಳಿದಿದೆ. ಜೊತೆಗೆ ಹೇಮಾವತಿ ಜಲಾಶಯದಿಂದಲೂ ನೀರು ಬರುತ್ತಿರುವ ಕಾರಣ ನೀರು ಬಿಡುಗಡೆ ಮಾಡಲಾಗಿದೆ.

ನದಿ ತೀರದಲ್ಲಿ ವಾಸಿಸುವ ಜನರ ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ನಿಗಮದ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಸಂಜೆ ಮತ್ತಷ್ಟು ನೀರು ಹರಿಸುವ ಸಾಧ್ಯತೆ ಇದ್ದು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.