ಹಲಗೂರು: ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗರುವ ಘಟನೆ ಸಮೀಪದ ಯತ್ತಂಬಾಡಿ ಗ್ರಾಮದಲ್ಲಿ ನಡೆದಿದೆ.
ಬುಧವಾರ ರಾತ್ರಿ ಊಟ ಮುಗಿಸಿ ಮನೆಯವರೆಲ್ಲರೂ ಮಲಗಿದ ನಂತರ ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ಕಳ್ಳರು ಮನೆಯೊಳಗೆ ನುಗ್ಗಿದ್ದಾರೆ. ಬೀರುವಿನಲ್ಲಿ ಇಟ್ಟಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಒತ್ತೊಯ್ದಿದ್ದಾರೆ ಎಂದು ಮನೆಯ ಮಾಲೀಕರಾದ ಪ್ರೇಮ ದೂರು ನೀಡಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ ಮತ್ತು ಪಿಎಸ್ಐ ಬಿ.ಮಹೇಂದ್ರ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಘಟನಾ ಸ್ಥಳಕ್ಕೆ ಶ್ವಾನ ದಳ ಬೆರಳಚ್ಚು ತಜ್ಞರ ತಂಡ ಬೇಟಿ ನೀಡಿ ಕಳ್ಳರನ್ನು ಪತ್ತೆಹಚ್ಚುವ ಕಾರ್ಯಚಾರಣೆ ನಡೆಸಿತು.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.