ADVERTISEMENT

ನಾಗಮಂಗಲ: ಪತ್ನಿಗೆ ಚಾಕುವಿನಿಂದ ಇರಿದ ಪತಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2023, 7:27 IST
Last Updated 10 ಜುಲೈ 2023, 7:27 IST
ಸಾಂದರ್ಭೀಕ ಚಿತ್ರ
ಸಾಂದರ್ಭೀಕ ಚಿತ್ರ    

ನಾಗಮಂಗಲ: ಹಲವು ದಿನಗಳಿಂದ ಹೊಂದಾಣಿಕೆಯಿಲ್ಲದೆ ಪತಿ- ಪತ್ನಿಯರ ನಡುವೆ ಜಗಳ ನಡೆಯುತ್ತಿದ್ದು, ಭಾನುವಾರ ಮಧ್ಯಾಹ್ನ ಮಾತಿಗೆ ಮಾತು ಬೆಳೆದಾಗ ಪತ್ನಿಗೆ ಚಾಕುವಿನಿಂದ ಇರಿದ ಘಟನೆ ತಾಲ್ಲೂಕಿನ ಹೊಣಕೆರೆ ಹೋಬಳಿಯ ಗಂಗವಾಡಿ ನಡೆದಿದೆ.

ಗ್ರಾಮದ ಕೃಷ್ಣಮೂರ್ತಿ (36) ಎಂಬಾತ ಗೌರಮ್ಮ (35) ಅವರಿಗೆ ಇರಿದಿದ್ದಾನೆ. ಆಗ ರಕ್ತದ ಮಡುವಿನಲ್ಲಿ ಬಿದ್ದು ಚೀರಾಡುತ್ತಿದ್ದ ಗೌರಮ್ಮನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕಳುಹಿಸಿದ್ದಾರೆ.

18 ವರ್ಷದ ಹಿಂದೆ ವಿವಾಹವಾಗಿದ್ದ ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ.

ADVERTISEMENT

ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಆರೋಪಿಯ ಬಂಧನಕ್ಕೆ ಹುಡುಕಾಟ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.