ಶ್ರೀರಂಗಪಟ್ಟಣ: ತಾಲ್ಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ಶ್ರೀನಾಥ್ ಎಂಬಾತ ತನ್ನ ಪತ್ನಿ ಪೂಜಾ (29) ಅವರನ್ನು ಭಾನುವಾರ ವೇಲ್‌ನಿಂದ ಬಿಗಿದು ಕೊಲೆ ಮಾಡಿ ಬೋರೇದೇವರ ದೇವಾಲಯ ಬಳಿ ಕಾವೇರಿ ನದಿಗೆ ಎಸೆದು, ಶ್ರೀರಂಗಪಟ್ಟಣ ಠಾಣೆಗೆ ಬುಧವಾರ ಬಂದು ಶರಣಾಗಿದ್ದಾನೆ.
‘ಅನ್ಯ ಪುರುಷನ ಜತೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ಪೂಜಾಳನ್ನು ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆತ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಶೋಧ ನಡೆಸಿದಾಗ ಭಾಗಶಃ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರಾಮಸ್ವಾಮಿ ನಾಲೆಯ ಗೇಟ್‌ಗೆ ಶವ ಸಿಕ್ಕಿಕೊಂಡಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.