ADVERTISEMENT

ಮುಖ್ಯಮಂತ್ರಿ ತವರಲ್ಲಿ ಲಾಟರಿ ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಜಯ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2020, 6:51 IST
Last Updated 30 ಡಿಸೆಂಬರ್ 2020, 6:51 IST
   

ಮಂಡ್ಯ: ಮುಖ್ಯಮಂತ್ರಿ ಯಡಿಯೂರಪ್ಪ ತವರು ಬೂಕನಕೆರೆ ಗ್ರಾಮ ಪಂಚಾಯತಿ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿ ಸರಿಸಮನಾದ ಮತ ಪಡೆದಿದ್ದರಿಂದ ಫಲಿತಾಂಶ ಡ್ರಾ ಆಗಿತ್ತು. ಬಳಿಕ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಲಾಟರಿ ಮೂಲಕ ಜಯ ಸಾಧಿಸಿದ್ದಾರೆ.

ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಂಜುಳಾ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರುಕ್ಮಿಣಮ್ಮ ತಲಾ183 ಮತ ಗಳಿಸಿದ್ದರು. ಬಳಿಕ ಚುನಾವಣಾಧಿಕಾರಿಗಳು ಲಾಟರಿ ಮೂಲಕ ಫಲಿತಾಂಶ ನಿರ್ಧರಿಸಿದ್ದಾರೆ.

ಲಾಟರಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಂಜಳಾ ಗೆಲುವು ಸಾಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.