ಮದ್ದೂರಿನಲ್ಲಿ ಶಾಸಕ ಕೆ.ಎಂ.ಉದಯ್ ಅವರ ಜನ್ಮದಿನದ ಅಂಗವಾಗಿ ಭಾನುವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಹಣ್ಣು ವಿತರಿಸಿದರು
ಮದ್ದೂರು: ಶಾಸಕ ಕೆ.ಎಂ.ಉದಯ್ ಅವರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ನಿರಂತರ ಹೋರಾಟ ಮಾಡಿ ಎರಡೇ ವರ್ಷಗಳಲ್ಲಿ ₹1000 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿಯ ಹರಿಕಾರ ಎಂದು ಪಾತ್ರರಾಗಿದ್ದಾರೆ’ ಎಂದು ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಚಲುವರಾಜು ತಿಳಿಸಿದರು.
ಶಾಸಕ ಕೆ.ಎಂ. ಉದಯ್ ಅವರ ಜನ್ಮದಿನದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಿಸಿ ಅವರು ಮಾತನಾಡಿದರು.
‘ಮದ್ದೂರು ಪಟ್ಟಣವನ್ನು ನಗರಸಭೆಯನ್ನಾಗಿ ಮಾಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದುಕೊಂಡಿದ್ದಾರೆ. ₹93 ಕೋಟಿ ವೆಚ್ಚದಲ್ಲಿ ಕೆಮ್ಮಣ್ಣು ನಾಲೆಯನ್ನು ಆಧುನಿಕರಣ ಮಾಡಲು ಭೂಮಿ ಪೂಜೆ ಮಾಡಿದ್ದಾರೆ. ಪಟ್ಣಣದ ಪೇಟೆಬೀದಿ ವಿಸ್ತರಣೆ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಕೆಲಸಗಳಿಗೆ ನಾಂದಿ ಹಾಡಿದ್ದಾರೆ. ತಾಲ್ಲೂಕಿನ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ ತಂದಿದ್ದಾರೆ. ಜತೆಗ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
‘ಕೆ.ಎಂ.ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಹಲವು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡು ನೊಂದವರಿಗೆ ಆಸರೆಯಾಗಿದ್ದಾರೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ಸ್ವಂತ ಹಣದಲ್ಲಿ ಶುಲ್ಕ ಕಟ್ಟುವುದು, ಶಾಲಾ ಬ್ಯಾಗ್, ನೋಟ್ ಬುಕ್, ಜಾಮಿಟ್ರಿ ಬಾಕ್ಸ್‌ಗಳನ್ನು ಉಚಿತವಾಗಿ ನೀಡುವ ಮೂಲಕ ವಿದ್ಯಾರ್ಥಿಮಿತ್ರ ಎನಿಸಿದ್ದಾರೆ’ ಎಂದು ಪ್ರಶಂಸಿಸಿದರು.
ಕಾಂಗ್ರೆಸ್ ಮುಖಂಡ ತಿಮ್ಮದಾಸ್ ಶಂಕರ್, ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಪ್ರಸನ್ನ, ಸ್ಥಾಯಿಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಎಂ.ಬಿ. ಸಚಿನ್, ಸರ್ವಮಂಗಳ, ಕೆ.ಎಂ. ರವಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ನಿರ್ದೇಶಕ ಹರೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮೇಗೌಡ , ಶಂಕರೇಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.