ADVERTISEMENT

ಉಗ್ರರ ದಾಳಿಗೆ ವಿಶೇಷ ಸ್ಥಾನ ರದ್ದು ಮಾಡಿದ್ದೇ ಕಾರಣ: ಶಾಸಕ ರಮೇಶ ಬಂಡಿಸಿದ್ದೇಗೌಡ

ಶಾಸಕ ರಮೇಶ ಬಂಡಿಸಿದ್ದೇಗೌಡ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 13:31 IST
Last Updated 23 ಏಪ್ರಿಲ್ 2025, 13:31 IST
ಶ್ರೀರಂಗಪಟ್ಟಣ ತಾಲ್ಲೂಕಿನ ಚಿಕ್ಕ ಅಂಕನಹಳ್ಳಿ ಗ್ರಾಮದಲ್ಲಿ ₹10 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಬುಧವಾರ ಚಾಲನೆ ನೀಡಿದರು. ಟಿಎಪಿಸಿಎಂಎಸ್‌ ಮಾಜಿ ಅಧ್ಯಕ್ಷ ಗಿರೀಶ್, ಪಿಕಾರ್ಡ್‌ ಬ್ಯಾಂಕ್‌ ಮಾಜಿ ನಿರ್ದೇಶಕ ನಿಂಗೇಗೌಡ, ಗ್ರಾ.ಪಂ. ಅಧ್ಯಕ್ಷೆ ಚನ್ನಮ್ಮ ಪಾಲ್ಗೊಂಡಿದ್ದರು
ಶ್ರೀರಂಗಪಟ್ಟಣ ತಾಲ್ಲೂಕಿನ ಚಿಕ್ಕ ಅಂಕನಹಳ್ಳಿ ಗ್ರಾಮದಲ್ಲಿ ₹10 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಬುಧವಾರ ಚಾಲನೆ ನೀಡಿದರು. ಟಿಎಪಿಸಿಎಂಎಸ್‌ ಮಾಜಿ ಅಧ್ಯಕ್ಷ ಗಿರೀಶ್, ಪಿಕಾರ್ಡ್‌ ಬ್ಯಾಂಕ್‌ ಮಾಜಿ ನಿರ್ದೇಶಕ ನಿಂಗೇಗೌಡ, ಗ್ರಾ.ಪಂ. ಅಧ್ಯಕ್ಷೆ ಚನ್ನಮ್ಮ ಪಾಲ್ಗೊಂಡಿದ್ದರು   

ಶ್ರೀರಂಗಪಟ್ಟಣ: ಜಮ್ಮು ಕಾಶ್ಮೀರಕ್ಕೆ ಕಲಂ 370ರ ಅಡಿ ಇದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಪಡಿಸಿದ್ದೇ ಮಂಗಳವಾರ ನಡೆದ ಉಗ್ರರ ದಾಳಿಗೆ ಕಾರಣ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ತಾಲ್ಲೂಕಿನ ಚಿಕ್ಕ ಅಂಕನಹಳ್ಳಿ ಗ್ರಾಮದಲ್ಲಿ ₹10 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರ ಕಲಂ 370 ರದ್ದು ಮಾಡಿದ ಕ್ರಮದಿಂದ ಆಕ್ರೋಶಗೊಂಡವರು ಈ ಕೃತ್ಯ ಎಸಗಿದ್ದು, ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣೆ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣ. ಆದರೆ ಇದು ಸಹಿಸಲು ಅಸಾಧ್ಯವಾದ ಕೃತ್ಯ. ನರರಾಕ್ಷಕರಿಗೆ ತಕ್ಷ ಶಿಕ್ಷೆ ಆಗಬೇಕು. ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ರಾಜ್ಯದಿಂದ ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರ ರಕ್ಷಣೆ ಮತ್ತು ಉಗ್ರರ ದಾಳಿಯಿಂದ ಪ್ರಾಣ ಕಳೆದುಕೊಂಡ ಮೃತರ ಕುಟುಂಬ ಸದಸ್ಯರ ಜತೆ ರಾಜ್ಯ ಸರ್ಕಾರ ಇರುತ್ತದೆ. ಜಾತಿ ಗಣತಿ ಹೆಸರಿನಲ್ಲಿ ವಿರೋಧ ಪಕ್ಷಗಳು ಜನರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುತ್ತಿವೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.