ವೈದ್ಯಾಧಿಕಾರಿ ಟಿಪ್ಪು ಸುಲ್ತಾನ್, ನಿವೃತ್ತ ಪ್ರಾಧ್ಯಾಪಕ ರಾಜಪ್ಪ ದಳವಾಯಿ
ಮಂಡ್ಯ: ಕೆ.ವಿ.ಶಂಕರಗೌಡ ಜೀವನ ಕುರಿತ ‘ನಿತ್ಯ ಸಚಿವ’ ನಾಟಕ ರಚಿಸಿದ ನಿವೃತ್ತ ಪ್ರಾಧ್ಯಾಪಕ ರಾಜಪ್ಪ ದಳವಾಯಿ ಅವರನ್ನು ‘ರಾಜ್ಯ ಮಟ್ಟದ ಕೆ.ವಿ.ಶಂಕರಗೌಡ ಮತ್ತು ಕೆ.ಎಸ್.ಸಚ್ಚಿದಾನಂದ ರಂಗಭೂಮಿ ಪ್ರಶಸ್ತಿ’ ಹಾಗೂ ನಾಗಮಂಗಲ ತಾಲ್ಲೂಕು ಹೊನ್ನಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಟಿಪ್ಪು ಸುಲ್ತಾನ್ ಅವರನ್ನು ‘ಸಮಾಜ ಸೇವಾ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
‘ಪ್ರಶಸ್ತಿಯು ತಲಾ ₹25 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಜನತಾ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ಕೆ.ವಿ.ಶಂಕರಗೌಡ ಅವರ 109ನೇ ಜನ್ಮದಿನಾಚರಣೆ ಅಂಗವಾಗಿ ಜುಲೈ 15ರಂದು ಬೆಳಿಗ್ಗೆ 11ಕ್ಕೆ ಪ್ರದಾನ ಮಾಡಲಾಗುವುದು’ ಎಂದು ಟ್ರಸ್ಟ್‌ನ ನಿರ್ದೇಶಕ ರಾಮಲಿಂಗಯ್ಯ ಹೇಳಿದರು.
‘ಕೆ.ವಿ.ಎಸ್. ತರಬೇತಿ ಮತ್ತು ಉದ್ಯೋಗ ಕೇಂದ್ರದಲ್ಲಿ ಸಮಾರಂಭ ನಡೆಯಲಿದೆ. ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಉದ್ಘಾಟಿಸುವರು. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಅಧ್ಯಕ್ಷತೆ ವಹಿಸುವರು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.