ADVERTISEMENT

ಮಿನಿ ವಿಧಾನಸೌಧದಲ್ಲಿ ಕುಡಿಯಲು ನೀರಿಲ್ಲ!

ಕಸದ ರಾಶಿ, ಕೂಡಲು ಆಸನವೇ ಇಲ್ಲ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2018, 18:50 IST
Last Updated 12 ಅಕ್ಟೋಬರ್ 2018, 18:50 IST
ಶ್ರೀರಂಗಪಟ್ಟಣ ಮಿನಿ ವಿಧಾನಸೌಧದಲ್ಲಿ ಕುಡಿಯುವ ನೀರು, ಆಸನ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಗಂಜಾಂನ ನಿರ್ಮಲಾ, ಸುಧಾಮಣಿ ಇತರರು ತಹಶೀಲ್ದಾರ್‌ ಡಿ. ನಾಗೇಶ್ ಅವರಿಗೆ ದೂರು ಸಲ್ಲಿಸಿದರು
ಶ್ರೀರಂಗಪಟ್ಟಣ ಮಿನಿ ವಿಧಾನಸೌಧದಲ್ಲಿ ಕುಡಿಯುವ ನೀರು, ಆಸನ ವ್ಯವಸ್ಥೆ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಗಂಜಾಂನ ನಿರ್ಮಲಾ, ಸುಧಾಮಣಿ ಇತರರು ತಹಶೀಲ್ದಾರ್‌ ಡಿ. ನಾಗೇಶ್ ಅವರಿಗೆ ದೂರು ಸಲ್ಲಿಸಿದರು   

ಶ್ರೀರಂಗಪಟ್ಟಣ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕುಡಿಯುವ ನೀರಿಲ್ಲದೆ ಜನರು ಬವಣೆ ಪಡುತ್ತಿದ್ದಾರೆ ಎಂದು ಗಂಜಾಂ ನಿರ್ಮಲಾ ಇತರರು ದೂರಿದರು.

ಇಲ್ಲಿನ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್‌ ಡಿ. ನಾಗೇಶ್‌ ಅವರನ್ನು ಶುಕ್ರವಾರ ಭೇಟಿ ಮಾಡಿದ ಗಂಜಾಂ, ಪಟ್ಟಣ ಹಾಗೂ ವಿವಿಧ ಗ್ರಾಮಗಳ ಜನರು ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು.

ಮಿನಿ ವಿಧಾನಸೌಧಕ್ಕೆ ವಿವಿಧ ಕೆಲಸಗಳಿಗಾಗಿ ದೂರದ ಊರುಗಳಿಂದ ಬರುವ ಜನರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲ. ಕಚೇರಿಯಲ್ಲಿ ಮಣಗಟ್ಟಲೆ ಕಸದ ರಾಶಿ ಬಿದ್ದಿದೆ. ಸ್ವಚ್ಛತೆ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಮರಳಾಗಾಲ ಮಂಜುನಾಥ್‌ ದೂರಿದರು.

ADVERTISEMENT

ಅಹವಾಲು ಆಲಿಸಿ ಮಾತನಾಡಿದ ತಹಶೀಲ್ದಾರ್‌ ಡಿ. ನಾಗೇಶ್‌, ‘ಮಿನಿ ವಿಧಾನಸೌಧದಲ್ಲಿದ್ದ ಕುಡಿಯುವ ನೀರಿನ ಘಟಕ ಕೆಟ್ಟಿದೆ. ಆದಷ್ಟು ಶೀಘ್ರ ಅದನ್ನು ದುರಸ್ತಿ ಮಾಡಿಸಲಾಗುವುದು. ಜನರು ಕೂರಲು ಆಸನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಡೆಗೆ ಗಮನ ಹರಿಸುತ್ತೇನೆ’ ಎಂದು ತಿಳಿಸಿದರು.

ಪುಟ್ಟಮ್ಮ, ಪಾಲಹಳ್ಳಿ ನರಸಿಂಹ, ಮೈಸೂರಿನ ಪ್ರೇಮಕುಮಾರಿ, ಸುಧಾಮಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.