ಹಲಗೂರು: ಸಮೀಪದ ಬೆನಮಹಳ್ಳಿ ಗ್ರಾಮದ ಹೊರವಲಯದಲ್ಲಿ ಮೇಯುತ್ತಿದ್ದ ಮೂರು ಕುರಿಗಳ ಮೇಲೆ ಶುಕ್ರವಾರ ಸಂಜೆ ಚಿರತೆ ದಾಳಿ ಮಾಡಿ ಕೊಂದುಹಾಕಿದೆ.
ಗ್ರಾಮದ ನಿವಾಸಿ ಚಿಕ್ಕತಾಯಮ್ಮ ಅವರು ಕುರಿ ಸಾಕಾಣಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಎಂದಿನಂತೆ ಕುರಿಗಳನ್ನು ಮೇಯಲು ಬಿಟ್ಟಿದ್ದಾಗ ಚಿರತೆ ದಾಳಿ ಮಾಡಿ ಮೂರು ಕುರಿಗಳನ್ನು ಸಾಯಿಸಿದೆ. ₹50 ಸಾವಿರಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು’ ಎಂದು ಚಿಕ್ಕತಾಯಮ್ಮ ಮನವಿ ಮಾಡಿದರು.
ಚಿರತೆ ದಾಳಿ ಕಂಡು ರೈತರು ರಾತ್ರಿ ಸಮಯದಲ್ಲಿ ಜಮೀನಿಗೆ ತೆರಳಲು ಭಯಭೀತರಾಗಿದ್ದಾರೆ. ಸಂಬಂಧಿಸಿದ ಅರಣ್ಯ ಇಲಾಖೆಯವರು ಬೋನನ್ನು ಇಟ್ಟು ಚಿರತೆ ಸೆರೆಗೆ ಕ್ರಮವಹಿಸಬೇಕೆಂದು ಗ್ರಾಮದ ಮುಖಂಡ ಪ್ರಸನ್ನ ಕುಮಾರ್ ಒತ್ತಾಯಿಸಿದರು.
ವಿಷಯ ತಿಳಿದ ಅರಣ್ಯ ಇಲಾಖೆ ಗಸ್ತು ಅರಣ್ಯ ಪಾಲಕ ಪಿ.ಎಂ. ಕೃಷ್ಣ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.