ADVERTISEMENT

ಕೆಆರ್‌ಎಸ್‌ಗೆ ಹೆಚ್ಚಿನ ಭದ್ರತೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 19:54 IST
Last Updated 23 ಏಪ್ರಿಲ್ 2019, 19:54 IST

ಮಂಡ್ಯ: ಶ್ರೀಲಂಕಾದಲ್ಲಿ ಬಾಂಬ್‌ ಸ್ಫೋಟ ನಡೆದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅದರಂತೆ ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಜಲಾಶಯದ ಸುತ್ತಮುತ್ತ ಕೈಗಾರಿಕಾ ಭದ್ರತಾ ಪಡೆ ನಿಯೋಜಿಸಲಾಗಿದೆ. ಜಲಾಶಯದ ನಾರ್ತ್‌ ಗೇಟ್‌ ಸೇರಿ ವಿವಿಧೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಬೃಂದಾವನ ಉದ್ಯಾನಕ್ಕೆ ಬರುವ ಪ್ರವಾಸಿಗರ ವಾಹನಗಳನ್ನು ತಪಾಸಣೆ ನಡೆಸಿ ಒಳಕ್ಕೆ ಬಿಡಲಾಗುತ್ತಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಜಲಾಶಯ ವೀಕ್ಷಣೆಗೆ ಪ್ರವಾಸಿಗರ ದಂಡೇ ಬರುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.