
ಪ್ರಜಾವಾಣಿ ವಾರ್ತೆ
ಸುಟ್ಟು ಕರಕಲಾದ ಕಾರು
ಶ್ರೀರಂಗಪಟ್ಟಣ: ಟಿಪ್ಪರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಪಾಲಹಳ್ಳಿ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಮುರುಕನಹಳ್ಳಿ ಗ್ರಾಮದ ಚಂದ್ರಶೇಖರ್ (49) ಜೀವಂತ ದಹನವಾಗಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಟಿಪ್ಪರ್ ಚಾಲಕ ತಲೆಮರೆಸಿಕೊಂಡಿದ್ದಾನೆ.
ಚಂದ್ರಶೇಖರ್ ಪಾಂಡವಪುರದಿಂದ ಹುಣಸೂರಿಗೆ ತೆರಳುತ್ತಿದ್ದರು. ಎದುರಿನಿಂದ ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಸಿಪಿಐ ಬಿ.ಜಿ. ಕುಮಾರ್ ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.