
ಪ್ರಜಾವಾಣಿ ವಾರ್ತೆ
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ‘ಟಿಪ್ಪು ಜಯಂತಿ ಆಚರಣೆಗೆ ನಿಷೇಧ ಹೇರಿದ್ದರೂ ಪಟ್ಟಣದಲ್ಲಿ ನ.10ರಂದು ಕಾರ್ಯಕ್ರಮ ನಡೆಸುವುದು ಖಚಿತ’ ಎಂದು ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಸುಶೀಲಾ ತಿಳಿಸಿದರು.
ಇಲ್ಲಿ ಮುಸ್ಲಿಂ ಸೌಹಾರ್ದ ಒಕ್ಕೂಟದಿಂದ ಭಾನುವಾರ ಹಮ್ಮಿಕೊಂಡಿದ್ದ ‘ಟಿಪ್ಪು ಸದ್ಭಾವನಾ’ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಟಿಪ್ಪು ಜಯಂತಿ ಆಚರಣೆ ತಡೆಯಲು ತಾಲ್ಲೂಕು ಆಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಯಾರೇ ತಡೆದರೂ ಟಿಪ್ಪು ಜಯಂತಿ ನಡೆಯಲಿದೆ’ ಎಂದು ಹೇಳಿದರು.
ನಿಷೇಧಾಜ್ಞೆ: ಸೋಮವಾರ (ನ.10) ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಚೇತನಾ ಯಾದವ್ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.